ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಮೃತಾಪುರ ಶಾಲೆಯ ಸಹ ಶಿಕ್ಷಕರಾದ ಉಮೇಶ್_ಟಿ_ಪಿ ಯವರು ಭಾರತ ಸರ್ಕಾರದಿಂದ ನೀಡಲಾಗುವ ರಾಷ್ಟ್ರಮಟ್ಟದ ಉತ್ತಮ_ಶಿಕ್ಷಕ_ಪ್ರಶಸ್ತಿಗೆ ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿದ್ದಾರೆ.
2004ರಲ್ಲಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಚಿಕ್ಕಬಳ್ಳಾರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿರುವ ಉಮೇಶ್, 2006ರಲ್ಲಿ ತಾಲ್ಲೂಕಿನ ಕೇಶವಾಪುರ ಶಾಲೆಗೆ ವರ್ಗಾವಣೆಯಾಗಿ ಬಂದರು.
2009ರಿಂದ ಅಮೃತಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯಲ್ಲಿ ವಿನೂತನ ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಿದರು.
ಆರಂಭದಲ್ಲಿದ್ದ 39 ವಿದ್ಯಾರ್ಥಿಗಳ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಿದರು. ದಾನಿಗಳ ನೆರವು ಪಡೆದು ಶಾಲೆಗೆ ಮೂಲಸೌಕರ್ಯ ಒದಗಿಸಿದರು.
ಶಿಕ್ಷಕ ಉಮೇಶ್ ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿದ್ದಾರೆ. ‘ನನ್ನಯ ಸೈಕಲ್ ಟ್ರಿಣ್ ಟ್ರಿಣ್’, ‘ವಚನಾಂಜಲಿ’, ‘ವಚನವಾಣಿ’, ‘ಫೋಟೋಕ್ಕೊಂದು ಫ್ರೇಮು’, ‘ಅಪ್ಪನು ಕೊಡಿಸಿದ ಮೊದಲ ಪುಸ್ತಕ’, ‘ದೇವರಿಗೆ ಬೀಗ’ ಎಂಬ ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ.
ಇವರ ಸಾಧನೆಗೆ,ಶ್ರಮಕ್ಕೆ ಈ ಬಾರಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಎಂದು ತಾಲೂಕಿನ ಜನ ಸಂತಸ ವ್ಯಕ್ತಪಡಿಸಿದ್ದಾರೆ…

ವರದಿ. ಸುರೇಶ್. ಎಸ್. ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
