;

ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ…!!!

ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
ಕಾನಹೊಸಹಳ್ಳಿ :- ಕಾನಹೊಸಹಳ್ಳಿ ಸಮೀಪದ ಆಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜನಾಯ್ಕ್ ನೆರವೇರಿಸಿ ನಂತರ ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆಯಬೇಕು. ಕೀಳರಿಮೆ ಬಿಟ್ಟು ತಮ್ಮಲ್ಲಿನ ಪ್ರತಿಭೆಯನ್ನು ಇತರ ಮಕ್ಕಳ ಎದುರು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾಗಬೇಕು, ಸಹಜವಾಗಿಯೇ ಮಕ್ಕಳಲ್ಲಿ ಪ್ರತಿಭೆ ಇರುತ್ತದೆ ಅದನ್ನು ಹೊರಹೊಮ್ಮಿಸುವ ಕೆಲಸ ಶಿಕ್ಷಕರಿಂದ ಆಗಬೇಕು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅಗತ್ಯವಾದ ವೇದಿಕೆಯನ್ನು ಕಲ್ಪಿಸಿಕೊಡಬೇಕು ಎಂದು ಮಾತನಾಡಿದರು., ಮಕ್ಕಳ ಶಿಕ್ಷಣಕ್ಕೆ ತಾಲೂಕಿನಲ್ಲಿ ಪೂರಕವಾದ ವಾತಾವರಣವಿದೆ ಶಿಕ್ಷಕರು ಹೆಚ್ಚು ಮುತುವರ್ಜಿ ವಹಿಸಿ ತಾವು ಕಲಿಸುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡುದ್ದಾದರೆ ಹಾಗೂ ಪೋಷಕರು ಸಹಕರಿಸಿದ್ದಲ್ಲಿ ಅತ್ಯುತ್ತಮ ಸಾಧನೆ ಸಾಧ್ಯ, ಆದ್ದರಿಂದ ಪೋಷಕರು ಹೆಚ್ಚು ಜವಾಬ್ದಾರಿಯಿಂದ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಬೇಕು, ಅವರ ಶೈಕ್ಷಣಿಕಅಗತ್ಯಗಳಿಗೆ ಸ್ಪಂದಿಸಬೇಕು. ಸರ್ಕಾರ ವಿದ್ಯಾರ್ಥಿಗಳ ಕಲಿಕೆ ಬಲಗೊಳ್ಳಲು ಹಲವಾರು ಸೌಲಭ್ಯಗಳನ್ನು ನೀಡುತ್ತದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದೆ ಅವುಗಳನ್ನು ಬಳಸಿಕೊಂಡು ಅತ್ಯುತ್ತಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ಮುಖ್ಯಗುರುಗಳಾದ ಶ್ರೀ ಅಜ್ಜನ ಗೌಡರು ಸ್ವಾಗತಿಸಿದರು, ಶ್ರೀಮತಿ ವರಲಕ್ಷ್ಮಿ ನಿರೂಪಣೆ ಮಾಡಿದರು, ಸಿ ಆರ್ ಪಿ ಜಿ ಟಿ ಸಿದ್ದೇಶ್ವರ ಶಿಕ್ಷಕರು ವಾಸ್ತವಿಕವಾಗಿ ಮಾತನಾಡಿದರು, ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಹಾದೇವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀಜಿ ಕೊಟ್ರಗೌಡ ಅಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಬಿ ಆರ್ ಪಿ ಶ್ರೀ ನಾಗರಾಜ್, ಶ್ರೀ ಎಂ ತಿಪ್ಪೇಸ್ವಾಮಿ ಎಸ್ ಡಿ ಎಂ ಸಿ ಅಧ್ಯಕ್ಷರು, ಶ್ರೀ ತಿಪ್ಪೇಸ್ವಾಮಿ ಸಿಆರ್ ಪಿ, ಶ್ರೀಮತಿ ಅನುಪಮಾ ಸಿ ಆರ್ ಪಿ, ಶ್ರೀಮತಿ ವಿಶಾಲ ಸಿ ಆರ್ ಪಿ,
ಹಾಗೂ ಈ ಕಾರ್ಯಕ್ರಮದಲ್ಲಿ ಆಲೂರು ಕ್ಲಸ್ಟರ್ ಭಾಗದ 17 ಶಾಲೆಯ ಶಿಕ್ಷಕರು ಸಹಶಿಕ್ಷಕರು ಶಾಲಾ ಮಕ್ಕಳು ಭಾಗವಹಿಸಿದ್ದರು. ಈ ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ವಿವಿಧ ವೇಷಭೂಷಣಗಳು ಸಾಂಸ್ಕೃತಿಕ ಕಾರ್ಯಕ್ರಮಗಳು, ಜರುಗಿದವು..

 

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;