;

ಕ್ಷೇತ್ರದ ಅಭಿವೃದ್ಧಿಗೆ ಬದ್ದ. ಶಾಸಕ ಎನ್.ವೈ. ಗೋಪಾಲಕೃಷ್ಣ….!!!

ಕ್ಷೇತ್ರದ ಅಭಿವೃದ್ಧಿಗೆ ಬದ್ದ. ಶಾಸಕ ಎನ್.ವೈ. ಗೋಪಾಲಕೃಷ್ಣ.
ಕೂಡ್ಲಿಗಿ: ಅನಿರೀಕ್ಷತವಾಗಿ ಕ್ಷೇತ್ರಕ್ಕೆ ಬಂದ ನನ್ನನ್ನು ಈ ಕ್ಷೇತ್ರದ ಜನರ ಗೆಲ್ಲಿಸಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಈಗಾಗಲೇ ಸಾಕಷ್ಟು ಅನುದಾನ ತಂದಿದ್ದು, ಮುಂದೆಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನಿಮ್ಮೆ ವಿಶ್ವಾಸವನ್ನು ಮತ್ತೊಮ್ಮೆ ಉಳಿಸಿಕೊಳ್ಳುವೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು. ಅವರು ಗುಡೇಕೋಟೆ ಕರಡಿ ಧಾಮದ ವಲಯ ಆರಣ್ಯ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದಲ್ಲಿ ಈಗಾಗಲೇ ಕೆರೆ ತುಂಬಿಸುವ ಯೋಜನೆ ಮುಕ್ತಾಯ ಹಂತದಲ್ಲಿದೆ. ಅಲ್ಲದೆ ಮಿನಿ ವಿಧಾನ ಸೌಧ, ಪಟ್ಟಣ ಪಂಚಾಯ್ತಿ ಕಟ್ಟಡಗಳನ್ನು ಶೀಘ್ರದಲ್ಲಿಯೇ ಉದ್ಘಾಟನೆ ಮಾದಲಾಗುವುದು. ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದು, ಶಾಲಾ, ಕಾಲೇಜು ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ರಸ್ತೆ, ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಗ್ರಾಮಾಂತರ ಪ್ರದೇಶದಲ್ಲಿಯೂ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.
ಸಣ್ಣ ನೀರಾವರಿ ಇಲಾಖೆ ಮುಖಾಂತರ ಈಗಾಗಲೇ ಅನೇಕ ಕಡೆ ಚೆಕ್ ನಿರ್ಮಾಣ ಮಾಡಲಾಗಿದೆ. ಇದರ ಮುಂದುವರಿದ ಭಾಗವಾಗಿ ಇಂದು ಎರಡು ಪ್ಯಾಕೇಜುಗಳಲ್ಲಿ 3.90 ಕೋಟಿ ವೆಚ್ಚದಲ್ಲಿ 4 ಹಾಗೂ 4.05 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂ ನಿರ್ಮಾಣ ಮಾಡಲು ಇಂದು ಚಾಲನೆ ನೀಡಲಾಗಿದೆ. ಈ ಚೆಕ್ ಡ್ಯಾಂ ನಿರ್ಮಾಣ ಮಾಡುವುದರಿಂದ ಅಂತರ್ಜಲ ಹೆಚ್ಚಾಗುವುದರ ಜೊತೆಗೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಹ ಸಿಗಲಿದೆ ಎಂದರು.


ನಾನು ಅನೀರಿಕ್ಷಿತವಾಗಿ ಈ ಕ್ಷೇತ್ರದಲ್ಲಿ ಶಾಸಕನಾಗಿ ಬಂದಿದ್ದೇನೆ. ಅದರೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಚೆಕ್ ಡ್ಯಾಂ ನಿರ್ಮಾಣ ಮಾಡುವಾಗ ನೀರು ಸಂಗ್ರಹವಾಗುವ ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ನಿರ್ಮಾಣ ಮಾಡಿದ ಚೆಕ್ ಡ್ಯಾಂ ಗಳ ಕಲ್ಲುಗಳನ್ನು ಕಿತ್ತು ಇನ್ನೊಂದು ಚೆಕ್ ನಿರ್ಮಾಣ ಮಾಡಲಾಗಿದೆ. ಆದರೆ ಈಗ ನಿರ್ಮಾಣ ಮಾಡುವ ಚೆಕ್ ಡ್ಯಾಂ ಗಳನ್ನು ಯಾವುದೇ ಕಾರಣಕ್ಕೂ ಹಾಳಾಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ವಿಚಾರದಲ್ಲಿ ಕೆಲವು ಕಡೆ ವ್ಯತ್ಯಾಸಗಳಾಗಿವೆ. ಇವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಅದರೂ ಕ್ಷೇತ್ರದಲ್ಲಿ ಟಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗಿದೆ. ಸಣ್ಣ ನೀರಾವರಿ ಇಲಾಖೆ ಗೆ ಇನ್ನು 50 ಕೋಟಿ ಅನುದಾನ ಬರಲಿದೆ. ಗುಂಡುಮುಣುಗು ಬಳಿ 5.75 ಕೋಟಿ ವೆಚ್ಚದಲ್ಲಿ ಕೆರೆ ನಿರ್ಮಾಣ ಮಾಡಲು ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು
ತಹಶೀಲ್ದಾರ್ ಟಿ. ಜಗದೀಶ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ವೈ. ರವಿಕುಮಾರ್, ಸಣ್ಣ ನೀರಾವರಿ ಇಲಾಖೆ ಇಇ ದೇವದಾಸ್, ಕಾರ್ಯನಿರ್ವಾಹಕ ಎಂಜನಿಯರ್ ಗಳಾದ ನೀರಾವರಿ ಇಲಾಖೆಯ ಅಂಜನೇಯ, ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗದ ಮಲ್ಲಿಕಾರ್ಜುನ, ಪಿಡಬ್ಲ್ಯ್ ಡಿ ಸುದರ್ಶನ, ಮುಖಂಡರಾದ ಬಿ. ಭೀಮೇಶ, ಹೊಂಬಾಳೆ ರೇವಣ್ಣ, ಸೂರ್ಯಪಾಪಣ್ಣ, ಟಿ.ಜಿ. ಮಲ್ಲಿಕಾರ್ಜುನ ಗೌಡ, ಎಸ್.ಪಿ. ಪ್ರಕಾಶ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ. ಚಂದ್ರು, ಮುತ್ತೆಪಾಲಯ್ಯ, ಪಾಪನಾಯಕ, ಪ್ರಣೇಶ, ಪಿ. ಮಂಜುನಾಥ ನಾಯಕ ಇದ್ದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;