;

ಪೋಷಣೆ ಮಾಸಾಚರಣೆ ಪೌಷ್ಟಿಕ ಆಹಾರ ಮತ್ತು ಮಾತೃ ವಂದನ ಸಪ್ತಾಹ ಕಾರ್ಯಕ್ರಮ…!!!

ಪೋಷಣೆ ಮಾಸಾಚರಣೆ ಪೌಷ್ಟಿಕ ಆಹಾರ ಮತ್ತು ಮಾತೃ ವಂದನ ಸಪ್ತಾಹ ಕಾರ್ಯಕ್ರಮ.
ಕಾನಹೊಸಹಳ್ಳಿ :- ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಒಟ್ಟಾಗಿ ಸೇರಿಪೋಷಣೆ ಮಾಸಾಚರಣೆ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಆಯೋಜಿಸಿದ್ದರು.
ಈ ಕಾರ್ಯಕ್ರಮ ಕುರಿತು ಅಂಗನವಾಡಿ ಕಾರ್ಯಕರ್ತೆ ಕೆಜಿ ಪಾರ್ವತಮ್ಮನವರು ಮಾತನಾಡಿ ಮಾತ್ರ ವಂದನಾ ಸಪ್ತಾಹ ಕಾರ್ಯಕ್ರಮದಲ್ಲಿ ಮೊದಲನೇ ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ವತಿಯಿಂದ ₹5000 ನೀಡಲಾಗುತ್ತದೆ, ಮಕ್ಕಳಿಗೆ ಹದಿಹರೆಯದ ವಯಸ್ಸಿನಲ್ಲಿ ಮದುವೆ ಮಾಡಬಾರದು ಇದರಿಂದ ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿತಿ ದುರ್ಬಲವಾಗುವ ಸಂಭವ ಹೆಚ್ಚು ವಿವಾಹಗಳನ್ನು ತಡೆಗಟ್ಟಲು ಆರೋಗ್ಯ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಕಬ್ಬಿಣಾಂಶ ನಾರಿನ ಅಂಶವುಳ್ಳ ಹಣ್ಣು-ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ ಇವನ್ನು ಸಮರ್ಪಕವಾಗಿ ದಿನನಿತ್ಯ ದ ಆಹಾರ ಸೇವೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಅನುಪಮಾ ಪೋಷಕರಿಗೆ ತಿಳಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನಬಸಮ್ಮ ಬಸಪ್ಪ ಹಾಗೂ ಉಪಾಧ್ಯಕ್ಷರಾದ ತಿಪ್ಪಮ್ಮ ನಾಗರಾಜ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಲಜೀವನ್ ಮಿಷನ್ ಲೋಕೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಂತೇಶ್ ಗ್ರಾಮ ಪಂಚಾಯತಿ ಸದಸ್ಯರಾದ ಬಸಣ್ಣ ಸುರೇಶ್ ಬೋರಣ್ಣ ಮುಖಂಡರಾದ ಜಿ ಓಬಣ್ಣ ನವೀನ್ ಕುಮಾರ್. ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಆಶಾ ಕಾರ್ಯಕರ್ತೆಯರು ಪೋಷಕರ ಮಹಿಳೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;