ಕಲಬುರ್ಗಿಗೆ ಇಂದು ನಾಡದೊರೆ ಪ್ರವಾಸ.
ಮಾನ್ಯ ಮುಖ್ಯಮಂತ್ರಿಗಳು ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಎಂದು ಸೆಪ್ಟಂಬರ್ 17ರಂದು ಶನಿವಾರ ಬೆಳಿಗ್ಗೆ 8.15 ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 8:00 45 ಗಂಟೆಗೆ ನಗರದ s.v.p. ವೃತ್ತದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಗಳಾದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. 9:15 ನಿಮಿಷ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು 11:00 ಗಂಟೆಗೆ ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಪೊಲೀಸ್ ಆಯುಕ್ತಾಲಯದ ನೂತನ ಕಟ್ಟಡವನ್ನು ಉದ್ಘಾಟಿಸುವರು. 11:00 ಗಂಟೆ 30 ನಿಮಿಷಕ್ಕೆ ನಗರದ ಎಸ್. ವಿ.ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ವನ್ನು ಉದ್ಘಾಟಿಸಿ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಅದೇ ರೀತಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಾಕ್ಷ್ಯಚಿತ್ರ ಬಿಡುಗಡೆ, ಕಲ್ಯಾಣ ಕರ್ನಾಟಕ ಸಾಹಿತ್ಯ-ಸಂಸ್ಕೃತಿ ಮಾಲೆಯ ಗ್ರಂಥಗಳ ಬಿಡುಗಡೆ ಹಾಗೂ ದಿ. ಶ್ರೀ ಚಂದ್ರಶೇಖರ್ ಪಾಟೀಲ್ ಮಹಾಗಾವ್ ಇವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ. ತೊಗರಿ ಅಭಿವೃದ್ಧಿ ಮಂಡಳಿಯಿಂದ ‘ಭೀಮಾ ಪಲ್ಸ್’ ಬಿಡುಗಡೆ ನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ರಮುಖ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ನಗರದ ಸೂಪರ್ಮಾರ್ಕೆಟ್ ವಾಣಿಜ್ಯ ಕಟ್ಟಡದ ಎರಡನೇ ಮಹಡಿಯಲ್ಲಿ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯನ್ನು” ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ” ಎಂದು ಮರು ನಾಮಕರಣ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3: 15 ನಿಮಿಷಕ್ಕೆ ಕಲಬುರ್ಗಿಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ತಿಳಿದುಬಂದಿದೆ….

ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
