ಇಟ್ಟಿಗಿ ಗ್ರಾಮ ಪಂಚಾಯಿತಿ ಕಾರ್ಯಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ & ಶ್ರೀ ವಿಶ್ವಕರ್ಮ ಮಹೋತ್ಸವ ಆಚರಣೆ.
17/09/2022 ರಂದು ವಿಜಯನಗರ ಜಿಲ್ಲಾ ಹೂವಿನ ಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮ ಪಂಚಾಯತಿಕಾರ್ಯಲಯದಲ್ಲಿ ‘ಕಲ್ಯಾಣ ಕರ್ನಾಟಕ ವಿಮೋಚನಾ & ಶ್ರೀ ವಿಶ್ವಕರ್ಮ ಮಹೋತ್ಸವ ಆಚರಣೆ ನಡೆಯಿತು. ಇಟ್ಟಿಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿಮಹಾಬಲೇಶ್ವರ ರವರಿಂದ ಕಲ್ಯಾಣಕರ್ನಾಟಕ ವಿಮೋಚನಾ ದಿನಾಚರಣೆಯಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿದರು. ಉಪಾಧ್ಯಕ್ಷರು,

ಸರ್ವಸದಸ್ಯರುಗಳು,ಮಹಿಳಾ ಒಕ್ಕೂಟದ ಸದಸ್ಯರುಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳೊಂದಿಗೆ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವನ್ನು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಭಗವಾನ್ ಶ್ರೀವಿಶ್ವಕರ್ಮನ ಪೋಟೊ ಪೂಜೆಯೊಂದಿಗೆ ನೇರವೇರಿಸಿದರು.ಈ ಕಾರ್ಯಕ್ರಮದಲ್ಲಿ ಇಟ್ಟಿಗಿಯ ಗಣ್ಯಮಾನ್ಯರು ಭಾಗವಹಿಸಿ ಇ ದಿನದ ಎರಡು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೇರವೇರಿಸಿದರು.
ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
