ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ
ಕಾನಹೊಸಹಳ್ಳಿ : ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಗ್ರಾಮದ ಶ್ರೀ ಶರಣೆಶ್ವರ ವಿದ್ಯಾಸಂಸ್ಥೆಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಕೆಎಂ ಶಶಿಧರ ಸ್ವಾಮಿಯವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಶಶಿಧರ ಸ್ವಾಮಿಯವರು ಮಾತನಾಡಿ ಪ್ರತಿವರ್ಷ,ಸೆ.17ರಂದು ಹೈದರಾಬಾದ್ ಕರ್ನಾಟಕ ದಿನಾಚರಣೆಯನ್ನ ಆಚರಿಸಲಾಗುತ್ತಿತ್ತು, ಈ ವರ್ಷ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಈ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತದೆ. ಬೀದರ್ ಬಳ್ಳಾರಿ ಕಲಬುರ್ಗಿ ಕೊಪ್ಪಳ ರಾಯಚೂರು ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳು ಈ ಸೌಲಭ್ಯಗಳನ್ನು ಪಡೆಯುತ್ತೇವೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕೆಎಂಎಸ್ ಪ್ರಥಮದರ್ಜೆ ಕಾಲೇಜಿನ ಸಿಬ್ಬಂದಿ. ಕೈಗಾರಿಕಾ ತರಬೇತಿ ಕೇಂದ್ರದ ಸಿಬ್ಬಂದಿ. ವಿದ್ಯಾನಿಕೇತನ ಶಾಲೆಯ ಸಿಬ್ಬಂದಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಡಿ. ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
