🪷 ನವರಾತ್ರಿ ದ್ವಿತೀಯ ದಿನದ ಶುಭಾಚರಣೆಯ ಶರಣು🙏🪷
🔱 ಬ್ರಹ್ಮಚಾರಿಣೀ 🔱
ದಧಾನಾ ಕರಪದ್ಮಾಭ್ಯಾಂ ಅಕ್ಷಮಾಲಾ ಕಮಂಡಲೂ.
ದೇವೀ ಪ್ರಸೀದತು ಮಯಿ ಬ್ರಹ್ಮಚಾರಿಣ್ಯನುತ್ತಮಾ.
ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಣಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಪಾರ್ವತಿಯಾಗಿ ಹಿಮಾಲಯನ ಪುತ್ರಿಯಾಗಿ ಜನಿಸಿದ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಬಹಳ ಕಠಿಣವಾದ ತಪಸ್ಸು ಮಾಡಿದ ಕಾರಣದಿಂದಾಗಿ ದೇವಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು.
ಧರ್ಮಗ್ರಂಥಗಳ ಪ್ರಕಾರ ಬ್ರಹ್ಮಚಾರಿಣಿಯು ಮಂಗಳ ಗ್ರಹದ ಅಧಿಪತಿ. ತನ್ನ ಭಕ್ತರಿಗೆ ಅದೃಷ್ಟವನ್ನು ನೀಡುವವಳು ಹಾಗೂ ಮಾನಸಿಕ ಕ್ಷೋಭೆಯನ್ನು ಪರಿಹರಿಸಿ ನೆಮ್ಮದಿಯನ್ನು ದಯಪಾಲಿಸುವವಳೂ ಬ್ರಹ್ಮಚಾರಿಣಿ. ಜನ್ಮ ಕುಂಡಲಿಯಲ್ಲಿ ಮಂಗಳ ಗ್ರಹವು ಕೆಟ್ಟ ಸ್ಥಾನದಲ್ಲಿದ್ದರೆ ಹಾಗೂ ಮಂಗಳ ದೋಷವಿದ್ದರೆ ಬ್ರಹ್ಮಚಾರಿಣಿಯನ್ನು ಪೂಜಿಸುವುದು ಒಳ್ಳೆಯದು.
ಬ್ರಹ್ಮಚಾರಿಣಿಗೆ ಬಹಳ ಇಷ್ಟವಾದ ಹೂವು ಮಲ್ಲಿಗೆ. ಹಾಗಾಗಿ ನವರಾತ್ರಿಯ ಎರಡನೇ ದಿನ ಮಲ್ಲಿಗೆಯಿಂದ ಈಕೆಯನ್ನು ಅಲಂಕರಿಸಿ. ಪೂಜಿಸಿ, ಮಾತೆಯ ಆಶೀರ್ವಾದವನ್ನು ಪಡೆದುಕೊಳ್ಳಿ. ಬ್ರಹ್ಮಚಾರಿಣಿಯ ಪೂಜೆಯನ್ನು ಮಾಡುವಾಗ 16 ವಿಧದ ಅರ್ಪಣೆಗಳನ್ನು ಮಾಡಿ, ಆರತಿಯೊಂದಿಗೆ ಪೂಜೆಯನ್ನು ಅಂತ್ಯಗೊಳಿಸಿ.
.
🌺🌺 ತಾಯಿ ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ 🌺🙌🔱..

ವರದಿ. ಪ್ರಕಾಶ್, ಇಟ್ಟಿಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
