ನವರಾತ್ರಿಯ ಮೂರನೇ ದಿನ ಶುಭಾಚರಣೆಯ ಶರಣು* 🙏
🌼🔱 *ಚಂದ್ರಘಂಟಾ* 🔱🌼
*ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ |*
*ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ* ||
ನವರಾತ್ರಿಯ ಮೂರನೇ ದಿನ ಚಂದ್ರಘಂಟ ದೇವಿಯನ್ನು ಪೂಜಿಸಲಾಗುತ್ತದೆ. ದುರ್ಗಾಮಾತೆಯ ವೈವಾಹಿಕ ಅವತಾರವಾಗಿರುವ ಚಂದ್ರಘಂಟೆಯನ್ನು ದುರ್ಗಾ ಮಾತೆಯ ರೌದ್ರ ಸ್ವರೂಪವೆಂಬುದಾಗಿಯೂ ಕರೆಯಲಾಗುತ್ತದೆ.
ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟ ರೂಪದಲ್ಲಿ ತೋರಿಸಿದ್ದಾರೆ. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುವಲ್ಲಿ ಸಫಲರಾಗುತ್ತಾರೆ. ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ
ಅತಿ ಭಯಂಕರನಾಗಿ ಕಾಣುತ್ತಿದ್ದ ಶಿವನನ್ನು ನೋಡಿ ಪಾರ್ವತಿ ದೇವಿಯ ತಾಯಿ ಮೂರ್ಛೆಹೋಗುತ್ತಾಳೆ. ಆಗ ಪಾರ್ವತಿಯು ಚಂದ್ರಘಂಟ ರೂಪದಲ್ಲಿ ಶಿವನ ಮುಂದೆ ಪ್ರತ್ಯಕ್ಷಳಾಗಿ ಶಿವನು ರಾಜಕುಮಾರನ ರೂಪವನ್ನು ತಾಳಬೇಕಾಗಿ ವಿನಂತಿಸಿಕೊಳ್ಳುತ್ತಾಳೆ. ಹೀಗೆ ಶಿವನು ಸುಂದರ ವರನ ರೂಪವನ್ನು ತಾಳಿದ ನಂತರ ಶಿವ ಪಾರ್ವತಿಯ ಮದುವೆ ನೆರವೇರುತ್ತದೆ.
🔱🌼🔱🌼🔱🌼🔱🌼🔱🌼🔱🌼🔱🌼
🌼🌺 *ತಾಯಿ ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ* 🙏🙌🌺.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
