ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅ,9ರಂದು ಆಚರಣೆ…!!!

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.9ರಂದು
ಹೊಸಪೇಟೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 9ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಅವರು ತಿಳಿಸಿದರು.


ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಯಂತಿ ಆಚರಣೆ ನಡೆಯಲಿದೆ. ಈ ಸಮಾರಂಭದಲ್ಲಿ ಇಲಾಖೆಯಿಂದ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗುತ್ತದೆ. ಮತ್ತು ನಗರಸಭೆಯಿಂದ ನಗರದ ವಿವಿಧ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಹಾಗೂ ಸ್ವಚ್ಚತೆಯನ್ನು ಕಾಪಾಡಬೇಕೆಂದು ಸೂಚನೆ ನೀಡಿದರು.
ಪೂರ್ವಭಾವಿ ಸಭೆಗೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕಾಗಿತ್ತು. ಆದರೆ ಸಾಕಷ್ಟು ಇಲಾಖೆ ಅಧಿಕಾರಿಗಳು ಸಭೆಗೆ ಆಗಮಿಸಿರುವುದಿಲ್ಲ. ಸಮಾಜ ಇಲಾಖೆ ಉಪನಿರ್ದೇಶಕರು ಸರಿಯಾಗಿ ಸಮನ್ವಯತೆ ಮಾಡಿರುವುದಿಲ್ಲ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ನಗರಸಭೆಯ ಪೌರಾಯುಕ್ತ ಮನೋಹರ್ ನಾಗರಾಜ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಗಾಧಿಲಿಂಗಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಗಣೇಶ್. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend