ಬಳ್ಳಾರಿ: ಜಿಲ್ಲಾಡಳಿತ ವತಿಯಿಂದ ಗಾಂಧೀಜಿ ಅವರ 153ನೇ ಜನ್ಮ ದಿನ ಆಚರಣೆ…!!!

ಬಳ್ಳಾರಿ: ಜಿಲ್ಲಾಡಳಿತ ವತಿಯಿಂದ ಗಾಂಧೀಜಿ ಅವರ 153ನೇ ಜನ್ಮ ದಿನ ಆಚರಣೆ
ಬಳ್ಳಾರಿ,ಅ.02: ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರದಂದು 153ನೇ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಗಾಂಧೀಜಿ ಅವರ ಪ್ರತಿಮೆಗೆ ಮಾಲರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ, ಗಾಂಧೀಜಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.


ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಹನೀಯರ ಜಯಂತಿಯ ಶುಭಾಷಯ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಗಳ ಆವರಣದಲ್ಲಿ ಆಯೋಜಿಸಲಾಗಿದ್ದ ಖಾದಿ ಭಂಡಾರದ ವಸ್ತ್ರ ಪ್ರದರ್ಶನ ಮಳಿಗೆಯನ್ನು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ವಿಕ್ಷೀಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಹಾಗೂ ಕಚೇರಿಯ ಸಿಬ್ಬಂದಿಗಳು ಇದ್ದರು…

ವರದಿ. ವಿರೇಶ್ ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend