🌼🔱 *ಕಾಳರಾತ್ರೀ* 🔱🌼
ಏಕವೇಣೀ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತಶರೀರಿಣೀ ||
ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ |
ವರ್ಧನಮೂರ್ಧ್ವಜಾ ಕೃಷ್ಣಾ ಕಾಳರಾತ್ರಿರ್ಭಯಂಕರೀ||
ನವರಾತ್ರಿಯ ಏಳನೇ ದಿನದಂದು ತಾಯಿ ಕಾಲರಾತ್ರಿಯನ್ನು ಪೂಜಿಸಲಾಗುವುದು. ಈ ರೂಪದಲ್ಲಿ ತಾಯಿಯು ತುಂಬಾ ರೌದ್ರಾವತಾರ ಮತ್ತು ಕಪ್ಪಾಗಿ ಕಾಣುತ್ತಾಳೆ. ಹೆಸರೇ ಹೇಳುವಂತೆ ಇದು ತಾಯಿಯ ಕರ್ಗತ್ತಲು ಮತ್ತು ಸಮಯದ ರೂಪವಾಗಿದೆ.
ರೌದ್ರಾವತಾರ ಮತ್ತು ತುಂಬಾ ಉಗ್ರ ರೂಪದಲ್ಲಿರುವ ದುರ್ಗೆಯು ಕಾಲರಾತ್ರಿಯ ರೂಪ ಧಾರಣೆ ಮಾಡಿ, ತನ್ನ ಬಂಗಾರದ ಮೈಬಣ್ಣದ ಚರ್ಮವನ್ನು ಕಿತ್ತು ರಾಕ್ಷಸರ ವಿರುದ್ಧ ಹೋರಾಡಲು ಹೋಗುತ್ತಾಳೆ. ಕಾಳರಾತ್ರಿಯು ಎಲ್ಲಾ ರೀತಿಯ ದುಷ್ಟಶಕ್ತಿ, ದುಷ್ಟತೆ ಮತ್ತು ನಕಾರಾತ್ಮಕ ಶಕ್ತಿ ಹಾಗೂ ಭೀತಿ ದೂರ ಮಾಡುತ್ತಾಳೆ. ಕಾಲರಾತ್ರಿಯು ತನ್ನ ಭಕ್ತರಿಗೆ ಹೆಚ್ಚಿನ ಸಂತೋಷ ಹಾಗೂ ತೃಪ್ತಿ ಕರುಣಿಸುವುದರಿಂದಾಗಿ ಆಕೆಯನ್ನು ಶುಭಾಂಕರಿ ಅಥವಾ ಪವಿತ್ರವೆಂದು ಪರಿಗಣಿಸಲಾಗಿದೆ
🌼🌼🌼🌼🌼🌼🌼🌼🌼🌼🌼

🌼🔱🙏 ತಾಯಿ ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ 🙌🙏🔱
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
