;

ನವಮಿಯಂದು ದುರ್ಗೆಯು ಒಂಭತ್ತನೇ ಅವತಾರವಾದ ಸಿದ್ಧಿಧಾತ್ರಿಯ ರೂಪದಲ್ಲಿರುತ್ತಾಳೆ…!!!

🔱🌼 *ಸಿದ್ಧಿಧಾತ್ರಿ* 🌼🔱

🔱🌼 ಸಿದ್ಧಿದಾತ್ರೀ 🔱🌼
ಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ |
ಸೇವ್ಯಮಾನಾ ಸದಾ ಭೂಯಾತ್ಸಿದ್ಧಿದಾ ಸಿದ್ಧಿದಾಯಿನೀ ||

ನವಮಿಯಂದು ದುರ್ಗೆಯು ಒಂಭತ್ತನೇ ಅವತಾರವಾದ ಸಿದ್ಧಿಧಾತ್ರಿಯ ರೂಪದಲ್ಲಿರುತ್ತಾಳೆ. ಸಿದ್ಧಿಧಾತ್ರಿ ದೇವಿಯು ತ್ರಿಮೂರ್ತಿಗಳಾಗಿರುವ ಬ್ರಹ್ಮ, ವಿಷ್ಣು, ಮಹೇಶ್ವರರಿಗೆ ಆಧ್ಯಾತ್ಮಿಕ ವೈಭವ ಹಾಗೂ ಪರಿಪೂರ್ಣತೆ ನೀಡುತ್ತಾಳೆ. ಅಷ್ಟ ಮಹಾಸಿದ್ಧಿಯನ್ನು ನಿರ್ಮಿಸಿ ಅದನ್ನು ತ್ರಿಮೂರ್ತಿಗಳಿಗೆ ನೀಡುತ್ತಾಳೆ. ತಾಯಿ ಸಿದ್ಧಿಧಾತ್ರಿಯು ಪರಿಪೂರ್ಣತೆ, ಎಲ್ಲಾ ರೀತಿಯ ಶಕ್ತಿ, ವೈಭವ ಮತ್ತು ಮಹಿಮೆಯ ಮೂಲ.

ಹೀಗೆ ನವರಾತ್ರಿಯ ಒಂಭತ್ತೂ ದಿನಗಳಲ್ಲಿ ನವದುರ್ಗೆಯರನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ ಎನ್ನಲಾಗುತ್ತದೆ.

ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ 🙏🔱🙌

 

 

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;