ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಬಿಡುಗಡೆ, ಮುಖ್ಯಮಂತ್ರಿಗೆ ಅಭಿನಂದನೆ – ಹಿರೇಮಠ…!!!

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಬಿಡುಗಡೆ, ಮುಖ್ಯಮಂತ್ರಿಗೆ ಅಭಿನಂದನೆ – ಹಿರೇಮಠ.

ಸಿಂಧನೂರು:ಅ.10. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1ನೇ ಜುಲೈ 2022ರಿಂದ ಬಾಕಿಯಿದ್ದ ತುಟ್ಟಿಭತ್ಯೆಯನ್ನು ಬಿಡುಗಡೆಗೆ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರಿ ನೌಕರರ ಸಂಘದ ತಾಲ್ಲೂಕಾಧ್ಯಕ್ಷ ಚಂದ್ರಶೇಖರ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ತುಟ್ಟಿಭತ್ಯೆ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಸರ್ಕಾರ, ಸರ್ಕಾರಿ ನೌಕರರಿಗೆ ಶೇ.3.75 ರಷ್ಟು ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಿ
ಮೂಲ ವೇತನದ ಶೇ.27.25 ರಿಂದ ಶೇ.31.00 ರಷ್ಟು ಮಾಡಿ,1ನೇ ಜುಲೈ 2022ರಿಂದ ಪೂರ್ವಾ ನ್ವಯವಾಗಿ ಜಾರಿಗೆ ಬರುವಂತೆ ಮಂಜೂರು ಮಾಡಿ ಸರ್ಕಾರದ ಆದೇಶ ಹೊರಡಿಸಿದ್ದು, ಇದರಿಂದಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3ಲಕ್ಷ ನೌಕರರು,ಸುಮಾರು 4.5 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದ್ದು, ಸಂಘವು ಸಲ್ಲಿಸಿದ ಮನವಿಗೆ 24ಗಂಟೆಯೊಳಗೆ ಸ್ಪಂಧಿಸಿ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ರಾಜ್ಯ ಸರ್ಕಾರಕ್ಕೆ, ಸಂಘದ ಪರವಾಗಿ ಶ್ರಮಿಸಿದ ರಾಜ್ಯಾಧ್ಯಕ್ಷ ಸಿ. ಎಸ್.ಷಡಾಕ್ಷರಿ ಅವರಿಗೆ ಸಮಸ್ತ ಸಿಂಧನೂರು ತಾಲ್ಲೂಕು ನೌಕರರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದು ಹಿರೇಮಠ ತಿಳಿಸಿದ್ದಾರೆ…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend