ಮಹಿಳೆಯರು ಸ್ವಾವಲಂಬನೆ ಜೀವನ ನಡೆಸಲು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ -ಲಕ್ಷ್ಮಿ ದೇವಿ…!!!

ಮಹಿಳೆಯರು ಸ್ವಾವಲಂಬನೆ ಜೀವನ ನಡೆಸಲು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ -ಲಕ್ಷ್ಮಿ ದೇವಿ.

ಸಿಂಧನೂರು:ಅ.10.ದೇವರಗುಡಿ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ರಾಯಚೂರು, ಜಿಲ್ಲಾ ಪಂಚಾಯಿತಿ ರಾಯಚೂರು,ತಾಲೂಕ ಪಂಚಾಯಿತಿ ಸಿಂಧನೂರು ಆಯೋಗದಲ್ಲಿ ಉನ್ನತಿ ತರಬೇತಿಗೆ ಚಾಲನೆ ನೀಡಲಾಯಿತು.

ಮಹಿಳೆಯರು ವಿವಿಧ ತರಬೇತಿಯಲ್ಲಿ ತೊಡಗಿಸಿಕೊಂಡು ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬನೆ ಸಾಧಿಸಬೇಕು ಉನ್ನತಿ ಯೋಜನೆ ಕೆಳಗೆ ಹೈನುಗಾರಿಕೆ ತರಬೇತಿ ಪಡೆದು ಹೈನುಗಾರಿಕೆಯನ್ನು ಇನ್ನು ಉತ್ತಮಗೊಳಿಸಿ ಲಾಭದಾಯಕವಾಗಿಸಿಕೊಳ್ಳಿ ಎಂದು ಶ್ರೀಮತಿ ಲಕ್ಷ್ಮಿ ದೇವಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸವಿತಾ, ಆರ್ ಸಿ ಟಿ ತರಬೇತಿ ಕೇಂದ್ರದ ನಿರ್ದೇಶಕ ವಿಜಯಕುಮಾರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ವೀರಭದ್ರ ಗೌಡ ಗಚ್ಚಿನಮನಿ, ವಲಯ ಮೇಲ್ವಿಚಾರಕ ಮೌನೇಶ, ಗ್ರಾಮ ಪಂಚಾಯಿತಿ ಸದಸ್ಯರು ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend