ಸ್ನೇಹ ಸಂಸ್ಥೆಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಕಿಟ್ ವಿತರಣೆ…!!!

ಸ್ನೇಹ ಸಂಸ್ಥೆಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಕಿಟ್ ವಿತರಣೆ

ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ಸುರಕ್ಷತಾ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಉದ್ಘಾಟನೆ ಮಾಡಿ ಅಂಗನವಾಡಿ ಕಾರ್ಯಕರ್ತರಿಗೆ ಕಿಟ್ ವಿತರಿಸಿ ನಂತರ ಮಾತನಾಡಿ ಸ್ನೇಹ ಸಂಸ್ಥೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ಸುರಕ್ಷತಾ ಸಾಮಗ್ರಿಗಳ ಕಿಟ್ ಕೊಟ್ಟಿದ್ದು ತುಂಬಾ ಸಂತೋಷವಾಯಿತು. ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ದೊಡ್ಡ ಕಾರ್ಯಕ್ರಮ ಏರ್ಪಡಿಸಲಾಗುವುದು ಸಂಸ್ಥೆಯ ನಿರ್ದೇಶಕರಿಗೆ ಧನ್ಯವಾದಗಳು ಹೇಳಿದರು. ಈ ಕಾರ್ಯಕ್ರಮ ಕುರಿತು ಸ್ನೇಹ ಸಂಸ್ಥೆಯ ಸಂಸ್ಥಾಪಕರಾದ ರಾಮಂಜನಯ್ಯ ಮಾತನಾಡಿ ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ನಾಗನಗೌಡ್ರು ಹಾಗೂ ಬಿಜೆಪಿ ಮುಖಂಡರು ತಾಲೂಕಿನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend