ಧರ್ಮಸ್ಥಳ ಯೋಜನಾ ಕಚೇರಿಯಲ್ಲಿ ಲಕ್ಷ್ಮಿ ಪೂಜೆ…!!!

ಧರ್ಮಸ್ಥಳ ಯೋಜನಾ ಕಚೇರಿಯಲ್ಲಿ ಲಕ್ಷ್ಮಿ ಪೂಜೆ.

ಕೂಡ್ಲಿಗಿ: ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾ ಕಚೇರಿಯಲ್ಲಿ ದೀಪಾವಳಿ ಅಂಗವಾಗಿ ಶ್ರೀ ಲಕ್ಷ್ಮಿ ಹಾಗೂ ವಾಹನ ಪೂಜೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಆರ್ಚಕ ನವೀನ್ ಕುಮಾರ್ ಪೌರೋಹಿತ್ಯದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜಾ ಕಾರ್ಯದಲ್ಲಿ ತಾಲ್ಲೂಕು ಯೋಜನಾಧಿಕಾರಿ, ನಿರ್ದೇಶಕರು, ಹಾಗೂ ಯೋಜನಾ ಕಚೇರಿಯ ಸಿಬ್ಬಂದಿ ಭಾಗಿಯಾಗಿದ್ದರು.
ಕಾರ್ಯಕಮದಲ್ಲಿ ಭಾಗಿಯಾಗಿದ್ದ ಪಟ್ಟಣ ಪಂಚಾಯ್ತಿ ಸದಸ್ಯ ಹಾಗೂ ಸಂಸ್ಥೆಯ ನಿರ್ದೇಶಕ ಕಾವಲ್ಲಿ ಶಿವಪ್ಪ ನಾಯಕ ಮಾತನಾಡಿ, ಹಬ್ಬ ಹರಿದಿನಗಳು ಹಾಗೂ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಸೇರಿ ಸಹೋದರತೆಯ ಸಂದೇಶ ಸಾರಿದಾಗ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ. ಮಹಿಳಾ ಸಬಲೀಕರಣ ಹಾಗೂ ಗ್ರಾಮಾಭಿವೃದ್ಧಿಗೆ ಒತ್ತು ನೀಡಿ ಕೆಲಸ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಹಿಂದುಳಿದ ತಾಲ್ಲೂಕಿನ ಜನತೆಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಬದುಕೆ ದಾರಿಯಾಗಿದೆ ಎಂದರು.
ಜಿಲ್ಲಾ ನಿರ್ದೇಶಕ ಚಿದಾನಂದ, ಯೋಜನಾಧಿಕಾರಿ ಸಂತೋಷ್ ಕುಮಾರ್, ನಿರ್ದೇಶಕರಾದ ಹಡಗಲಿ ವೀರಭದ್ರಪ್ಪ, ಜಿ.ಆರ್. ಸಿದ್ದೇಶ, ಕಕ್ಕುಪ್ಪಿ ಗುಂಡಣ್ಣ, ವಕೀಲ ಎ. ರವಿ ಹಾಗೂ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು…

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend