ತಾಲೂಕಾಡಳಿತ ವತಿಯಿಂದ “ಕೋಟಿ ಕಂಠ ಗೀತ ಗಾಯನ”…!!!

ತಾಲೂಕಾಡಳಿತ ವತಿಯಿಂದ “ಕೋಟಿ ಕಂಠ ಗೀತ ಗಾಯನ”

ಸಿಂಧನೂರು:ಅ.28.67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಯೋಜಿಸ ಲಾಗಿದ್ದು ತಾಲೂಕಾಡಳಿದಿಂದ ನಗರದ ಮಿನಿ ವಿಧಾನಸೌಧದ ತಹಸೀಲ್ ಕಛೇರಿಯಲ್ಲಿ ತಾಯಿ ಭುವನೇಶ್ವರಿ ಮಾತೆಗೆ ಪುಷ್ಪನಮನ ಅರ್ಪಿಸುವ ಮೂಲಕ ಚಾಲನೆ ನೀಡಿದರು.
ನಾಡು ನುಡಿಯ ಬಗ್ಗೆ ಅಭಿಯಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆಮೂಡಿಸುವಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ.ಈ ದೃಷ್ಟಿಯಿಂದ ಶುಕ್ರವಾರದಂದು ನನ್ನ ನಾಡು ನನ್ನ ಹಾಡು ಸಮೂಹ ಗೀತಗಾಯನ ಕನ್ನಡ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ನಾಡಗೀತೆಯಾದ ‘ಜಯ ಭಾರತ ಜನನೀಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು,ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಬೆಳಗ್ಗೆ 11.00 ಗಂಟೆಗೆ ಕನ್ನಡ ಪರ ಸಂಘಟನೆಗಳ ಮುಖಂಡರು, ತಾಲೂಕು ಅಧಿಕಾರಿಗಳು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು,ಸಿಬ್ಬಂದಿ ವರ್ಗದವರು ಹಾಗೂ ನುರಿತ ಸಂಗೀತಗಾರರು ಪಾಲ್ಗೊಂಡು ಕೋಟಿ ಕಂಠ ಗಾನ ಏಕಕಾಲದಲ್ಲಿ ಮೊಳಗಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ನಗರಸಭೆ ಸದಸ್ಯರಾದ ಚಂದ್ರಶೇಖರ ಮೈಲಾರ,ವೀರಭದ್ರಪ್ಪ ಕುರುಕುಂದಿ, ಚಂದ್ರಶೇಖರ, ಶಾಂತಕುಮಾರ, ಎ.ಡಬ್ಯೂ.ಇ ಅನ್ನಪೂರ್ಣಮ್ಮ, ಸಮಾಜ ಕಲ್ಯಾಣ ಅಧಿಕಾರಿ ವಿಜಯ್. ಎಸ್, ನಂದಿಬೇವೂರು, ಕನ್ನಡಪರ ಸಂಘಟನೆಯ ಮುಖಂಡರುಗಳಾದ ಗಂಗಣ್ಣ ಡಿಶ್, ಮೌನೇಶ ದೊರೆ, ಸುರೇಶ ಕಟ್ಟಿಮನಿ, ಬಸವರಾಜ ಗಸ್ತಿ ಇನ್ನಿತರರಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend