ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಗಾಲಿ‌ ಜನಾರ್ದನ ರೆಡ್ಡಿ: ಬಿಜೆಪಿ ಬಗ್ಗೆ ಅಷ್ಟೊಂದು ಅಸಮಾಧಾನವೇಕೆ..?

ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಗಾಲಿ‌ ಜನಾರ್ದನ ರೆಡ್ಡಿ: ಬಿಜೆಪಿ ಬಗ್ಗೆ ಅಷ್ಟೊಂದು ಅಸಮಾಧಾನವೇಕೆ..?

ಬಳ್ಳಾರಿಯ ಗಣಿಧಣಿ ಎಂದೇ ಪ್ರಖ್ಯಾತರಾಗಿರುವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.
ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆ ನನಗೆ ಗೊತ್ತಿಲ್ಲ, ಕಾಂಗ್ರೆಸ್ ಕೂಡ ನನಗೆ ಕಷ್ಟ ಕೊಟ್ಟಿದೆ. ಆದರೆ ಬಿಜೆಪಿಯವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ.

ನಾನು ನವೆಂಬರ್ 6ರ ಬಳಿಕ ಬಳ್ಳಾರಿಯಲ್ಲಿ ಇರುವ ಹಾಗೆ ಇಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನವೆಂಬರ್ 6ರ ಬಳಿಕ ಬಳ್ಳಾರಿ ಬಿಡಬೇಕು. ಆದರೆ ನಾ ಬಳ್ಳಾರಿ ಬಿಟ್ಟು ಬೆಂಗಳೂರಿನಲ್ಲಿ ಇರಲ್ಲ. ಇಲ್ಲೇ ಆಸುಪಾಸಿನಲ್ಲಿ ಇರುವೆ. ಮುಂದಿನ ದಿನ ನಾನು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಗಣಿನಾಡಿನಲ್ಲಿ ರಾಜಕೀಯ ಅಖಾಡ ರಂಗೇರುವ ವೇಳೆಯೇ ಬಿಜೆಪಿ ಬಗ್ಗೆ ಗಾಲಿ ಇಂತಹ ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಮುಜುಗರ ತಂದಿದ್ದಾರೆ. ಇದೆಲ್ಲ ನೋಡುತ್ತಿದ್ದರೆ ರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಾ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ..

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend