;

ಕನ್ನಡಾಂಬೆ ಸಂಜೀವಿನಿ ತಾಲೂಕು ಒಕ್ಕೂಟ ರಚನೆ…!!!

ಕನ್ನಡಾಂಬೆ ಸಂಜೀವಿನಿ ತಾಲೂಕು ಒಕ್ಕೂಟ ರಚನೆ.

ಸಿಂಧನೂರು:ನ.3.ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಭಾಗವಹಿಸಿ ಆರ್ಥಿಕವಾಗಿ ಸಬಲರಾದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಎಲ್ಲಾ ಮಹಿಳೆಯರು ಸರ್ಕಾರದ ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಲಕ್ಷ್ಮಿದೇವಿ ಸಲಹೆ ನೀಡಿದರು.
ಗುರುವಾರ ನಗರದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಜಿಲ್ಲಾ ಪಂಚಾಯತ್ ರಾಯಚೂರು ತಾಲೂಕು ಪಂಚಾಯಿತಿ ಸಿಂಧನೂರು ಹಾಗೂ ಎನ್ ಆರ್ ಎಲ್ ಎಂ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಒಕ್ಕೂಟ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆ ಗಳನ್ನು ಜಾರಿಗೊಳಿಸಿವೆ ವಿವಿಧ ಇಲಾಖೆಯಲ್ಲಿ ಮಹಿಳೆಯರಿಗೆ ಒದಗಿಸಲಾಗುವ ಸೌಲಭ್ಯಗಳನ್ನು ಪ್ರತಿಯೊಬ್ಬ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು.ಸ್ವಸಹಾಯ ಗುಂಪಿನ ಮಹಿಳೆಯರ ಅಭಿವೃದ್ಧಿ ನಿಟ್ಟಿನಲ್ಲಿ ಅನೇಕ ತರಬೇತಿಗಳನ್ನು ಆಯೋಜಿಸಲಾಗುತ್ತಿದ್ದು ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು ಕೌಶಲ್ಯ ಅಳವಡಿಸಿಕೊಳ್ಳುವ ಮೂಲಕ ಇನ್ನಿತರ ಮಹಿಳೆಯರಿಗೆ ಜ್ಞಾನ ಒದಗಿಸಿ ಕೊಡಬೇಕೆಂದು ತಿಳಿಸಿದರು.
ಸಹಾಯಕ ನಿರ್ದೇಶಕರಾದ ಅಮರಗುಂಡಪ್ಪ ಮಾತನಾಡಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬಂದು ಆರ್ಥಿಕವಾಗಿ ಸಬಲರಾಗಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ರಚನೆ ಮಾಡಲಾಯಿತು ಕನ್ನಡಾಂಬೆ ಸಂಜೀವಿನಿ ತಾಲೂಕ ಮಟ್ಟದ ಒಕ್ಕೂಟ ಎಂದು ಹೆಸರು ಸೂಚಿಸಿ ಈ ಒಕ್ಕೂಟಕ್ಕೆ ವಿದ್ಯಾವತಿ (ಅಧ್ಯಕ್ಷರು ) ಕಲ್ಮಂಗಿ, ಗದ್ದೆಮ್ಮ (ಉಪಾಧ್ಯಕ್ಷರು) ಅರಳಹಳ್ಳಿ,ನಾಗವೇಣಿ ಮಲ್ಲಾಪುರು (ಕಾರ್ಯದರ್ಶಿ)ವೆಂಕಮ್ಮ ಗೊರೆಬಾಳ( ಖಜಾಂಚಿ)
ಅಕ್ಷರ ಬಾನು (ಸಹ ಕಾರ್ಯದರ್ಶಿ)ಯಾಗಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಇನ್ನುಳಿದ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಪ್ರತಿನಿಧಿಗಳು ಆಯ್ಕೆಯಾದರು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ್ ಬನ್ನಿ ಎಲ್ಲಂ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ವೀರಭದ್ರಗೌಡ ಮೆಚ್ಚಿನಮನಿ, ವಲಯ ಮೇಲ್ವಿಚಾರಕ ಮೌನೇಶ ಶ್ರೀಪುರಂ ಭಾಗವಹಿಸಿದ್ದರು..

ವರದಿ.ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;