ಒಂದೇ ಕುಟುಂಬದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ. ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ನಿವಾಸಿ ತಿಪ್ಪಜ್ಜಿ (75), ಪುತ್ರಿಯರಾದ ಮಾರಕ್ಕ (45) ಹಾಗೂ ದ್ಯಾಮಕ್ಕ (43) ಮೃತಪಟ್ಟವರು.ಒಂದು ತಿಂಗಳ ಹಿಂದೆ ತಿಪ್ಪಕ್ಕನ ಮಗ ದ್ಯಾಮಣ್ಣ(45) ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ತಿಪ್ಪಕ್ಕ ಇಬ್ಬರೂ ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಳ್ಳಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
