;

ಹೊಸ ಬಸ್ ನಿಲ್ದಾಣದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಂಸದರ ಸೂಚನೆ…!!!

ಹೊಸ ಬಸ್ ನಿಲ್ದಾಣದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಂಸದರ ಸೂಚನೆ
ದಾವಣಗೆರೆ, ನಗರದಲ್ಲಿ ನೂತನವಾಗಿ ಕೈಗೊಂಡಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಸಂಸದ ಜಿ.ಎಂ.ಸಿದ್ದೇಶ್ವರ ಅವರು ಸೂಚನೆ ನೀಡಿದರು.
ಸೋಮವಾರ ನಗರದ ಕೆ.ಎಸ್.ಆರ್.ಟಿ.ಸಿ. ಹೊಸ ಬಸ್ ನಿಲ್ದಾಣ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ ನಡೆಸಿದ ಅವರು, ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಡಿಸೆಂಬರ್ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ, ಇಂಜನೀಯರ್‌ಗಳಿಗೆ ಸೂಚನೆ ನೀಡಿದರು.
ಪಾಲಿಕೆ ಮಹಾಪೌರರಾದ ಜಯಮ್ಮ ಗೋಪಿನಾಥ, ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಮಾಜಿ ಮಹಾಪೌರರಾದ ಎಸ್.ಟಿ.ವಿರೇಶ್, ಉಪ ಮಹಾಪೌರರಾದ ಗಾಯಿತ್ರಿ ಕೊಂಡಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ರವೀಂದ್ರ ಮಲ್ಲಾಪುರ ಇತರರು ಉಪಸ್ಥಿತರಿದ್ದರು.

ವರದಿ. ಎಚ್ಚರಿಕೆ ಕನ್ನಡ ನ್ಯೂಸ್, ದಾವಣಗೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;