;

ಚಳ್ಳಕೆರೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅದ್ದೂರಿ ಕನ್ನಡ ರಾಜೋತ್ಸವ ಕಾರ್ಯಕ್ರಮ…!!!

ಚಳ್ಳಕೆರೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅದ್ದೂರಿ ಕನ್ನಡ ರಾಜೋತ್ಸವ ಕಾರ್ಯಕ್ರಮ.

ಶಾಸಕ ಟಿ ರಘಮೂರ್ತಿ ರವರನ್ನು ಕಲಾ ತಂಡದೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡ ಜಿಟಿಟಿಸಿ ವಿಧ್ಯಾರ್ಥಿ ಬಳಗ.

ಹಳ್ಳಿ ಸೊಗಡು ಜನಪದ ಕೋಲಾಟದ ಮೂಲಕ ಶಾಸಕರನ್ನು ಸ್ವಾಗತಿಸಿ ವಿದ್ಯಾರ್ಥಿ ವೃಂದ.

ಚಳ್ಳಕೆರೆ ಶಾಸಕ ಟಿ ರಘಮೂರ್ತಿ ರವರಿಂದ ಧ್ವಜರೋಹಣ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ನಮನ.

ಶಾಸಕ ಟಿ ರಘಮೂರ್ತಿ ರವರು ಧ್ವಜರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭಕೋರಿದ ಶಾಸಕ ಟಿ ರಘಮೂರ್ತಿ.

ಚಳ್ಳಕೆರೆ ನಗರದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ, ಕನ್ನಡ ರಾಜೋತ್ಸವಕ್ಕೆ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಟಿ ರಘಮೂರ್ತಿ ಶಾಸಕರು ದ್ವಜರೋಹಣ ನೇರವೆರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಮಾನ್ಯ ಶಾಸಕರಾದ ಟಿ ರಘಮೂರ್ತಿ ರವರನ್ನು ಜಾನಪದ ಕಾಲತಂಡಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದ ಪರಿ ವಿಶೇಷವಾಗಿತ್ತು.

ಇನ್ನೂ ಕನ್ನಡಾಂಬೆಗೆ ಪುಷ್ಪಾರ್ಚನೆ ಸಲ್ಲಿಸಿದ ಮಾನ್ಯ ಶಾಸಕರು, ವಿದ್ಯಾರ್ಥಿಗಳು ನಡೆಸಿಕೊಟ್ಟ ಮನೋರಂಜನೆ ಕಾರ್ಯಕ್ರಮವನ್ನು ವೀಕ್ಷಿಸಿ ಸಂತಸ ಪಟ್ಟರು.

ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ವಿದ್ಯಾರ್ಥಿಗಳು ಈ ದೇಶದ ಶಕ್ತಿ. ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ಹಿತದೃಷ್ಟಿಯಿಂದ ಕ್ಷೇತ್ರದಲ್ಲಿ ಶೈಕ್ಷಣಿಕ ಕೇಂದ್ರಗಳನ್ನು ತರಲಾಗಿದೆ. ಈ ಅವಕಾಶಗಳನ್ನು ಮಕ್ಕಳು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು. ದೇಶಕ್ಕೆ ಉತ್ತಮ ಪ್ರಜೆಯಾಗಿ, ಹೆತ್ತವರಿಗೆ ಉತ್ತಮ ಮಕ್ಕಳಾಗಿ ಉತ್ತಮ ಸಾಧನೆ ಮಾಡುವುದರ ಜೊತೆಯಲ್ಲಿ, ಉನ್ನತ ಸ್ಥಾನದಲ್ಲಿ ಉದ್ಯೋಗ ಪಡೆದು, ಪಾಲಕರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತೆ ಕೆಲಸ ತಮ್ಮಿಂದ ಹಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇನ್ನು ಜಿಟಿಟಿಸಿ ಕೇಂದ್ರದ ಪ್ರಯೋಗಾಲಯಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ವಿದ್ಯಾರ್ಥಿಗಳು ತಯಾರಿಸಿದ ವಿವಿಧ ತಾಂತ್ರಿಕ ವಿವಿಧ ತಾಂತ್ರಿಕ ವಿನ್ಯಾಸಗಳನ್ನು ಪರಿಶೀಲಿಸಿದ ವಿದ್ಯಾರ್ಥಿ ಮಿತ್ರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಆಂಜನೇಯ ನಗರಸಭಾ ಸದಸ್ಯರುಗಳಾದ ರಮೇಶ್ ಗೌಡ ರಾಘವೇಂದ್ರ , ಮಾಜಿ ನಗರಸಭಾ ಸದಸ್ಯರು ಮತ್ತು ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷರಾದ ಪ್ರಸನ್ನ ಕುಮಾರ್ ಪ್ರಸನ್ನ ಕುಮಾರ್ , ಮಾಜಿ ತಾಲೂಕ ಪಂಚಾಯತಿ ಸದಸ್ಯರಾದ ಎಚ್ ಆಂಜನೇಯ , ಮುಖಂಡರಾದ ದೊಡ್ಡರಂಗಪ್ಪ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು, ಶಿಕ್ಷಕ ವೃಂದ ವಿದ್ಯಾರ್ಥಿ ಮೀತ್ರರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;