ಕನ್ನಡ ತೇರು ಎಳೆಯೋಣ ಬಾರ ವಿನೂತನ ಕಾರ್ಯಕ್ರಮ…!!!

ಕನ್ನಡ ತೇರು ಎಳೆಯೋಣ ಬಾರ ವಿನೂತನ ಕಾರ್ಯಕ್ರಮ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಎಂ. ಬಿ.ಅಯ್ಯನಹಳ್ಳಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶಾಲೆಯ ಮಕ್ಕಳೊಂದಿಗೆ ಕನ್ನಡದ ತೇರು ಎಳೆಯೋಣ ಬಾರ ಎಂಬ ವಿನೂತನ ಕಾರ್ಯಕ್ರಮವನ್ನು ಚಿಕ್ಕ ಜೋಗಿಹಳ್ಳಿ ಗ್ರಾಮದಲ್ಲಿ ಆಚರಿಸಲಾಯಿತು.

ಈ ಕನ್ನಡ ತೇರಿನಲ್ಲಿ ಸಾಹಿತಿಗಳ ಪೋಟೋಗಳಂತು ರಾರಾಜಿಸಿದವು, ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ವೇಷ ಭೂಷಣ ಧರಿಸಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ಮಾಡಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಕನಡುಕು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕಲ್ಪನಾ ಹೆಮೇಶ್ ಗೌಡ ಮಾತನಾಡಿ ಇಂತಹ ಕಾರ್ಯಕ್ರಮದಿಂದ ಮಕ್ಕಳಲ್ಲಿ ಕನ್ನಡ ಭಾಷೆ, ನುಡಿ ಹಾಗೂ ದೇಶ ಭಕ್ತಿ ಬಗ್ಗೆ ಗೌರವ ಹೆಚ್ಚುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸ್ವಾಮಿ ವಿವೇಕಾನಂದ ಶಾಲಾ ಸಿಬ್ಬಂದಿ ವರ್ಗ ಮಕ್ಕಳ ಪೋಷಕರು, ಸಾರ್ವಜನಿಕರು ಭಾಗವಹಿಸಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend