ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಕಾನಮಡುಗು ಗ್ರಾಮದಲ್ಲಿ ಶುಕ್ರವಾರ ಸಂಜೆ ಶ್ರೀ ಶರಣ ಬಸವೇಶ್ವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಶ್ರೀ ಶರಣಬಸವೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ ತಂದು ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸ್ವಾಮಿಯ ರಥ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ. ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ. ಎಸೆದು ಭಕ್ತಿ ಸಮರ್ಪಿಸಿದರು. ಐಮಡಿ ಶರಣಾರ್ಯರು ರಥೋತ್ಸವಕ್ಕೆ ಪೂಜೆ ಸಲ್ಲಿಸಿದರು. ಶ್ರೀ ಸ್ವಾಮಿಯ ಪಟ್ಟವನ್ನು ಜಿ ಓಬಣ್ಣ ಕಾಂಗ್ರೆಸ್ ಮುಖಂಡರು ಜುಮ್ಮೊಬನಹಳ್ಳಿ ಇವರಿಗೆ ರೂ. 1,25,000 ಸಾವಿರಕ್ಕೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಹುಲಿಕೆರೆ, ಹೊಸಹಳ್ಳಿ. ಆಲೂರು. ಹಿರೇಕುಂಬಳಗುಂಟೆ. ಪಕ್ಕದ ದಾವಣಗೆರೆ ಚಿತ್ರದುರ್ಗ ಜಿಲ್ಲೆಗಳ ಭಕ್ತರು ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ವರದಿ :ಸಿ ಅರುಣ್ ಕುಮಾರ್ ಜುಮ್ಹೋಬನಹಳ್ಳ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
