ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎನ್ನುವ ಧ್ಯೇಯ ಮಂತ್ರದೊಂದಿಗೆ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು,,,,, ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಅರ್ಜಿದಾರರಾದ ಶ್ರೀ ಗುರುರಾಜ್ ನಾಯಕ ರವರು ಕೆಪಿಸಿಸಿ ಅಧ್ಯಕ್ಷರ ಆದೇಶದಂತೆ ಈಗಿನ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳು, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಹೊತ್ತು ಕೊಡದೆ ಬರೀ 40% ಪರ್ಸೆಂಟ್ ಹಣವನ್ನು ಲೂಟಿ ಹೊಡೆಯುತ್ತಿರುವ ಈಗಿನ ರಾಜ್ಯ ಬಿಜೆಪಿ ಸರ್ಕಾರದಲ್ಲಿರುವ ಶಾಸಕರು ಹಾಗೂ ಮಂತ್ರಿಗಳು ತೊಡಗಿದ್ದಾರೆ, ಇದೇ ಕಾರಣಕ್ಕಾಗಿ ನಾವುಗಳು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಅದಕ್ಕಾಗಿ ಪ್ರತಿಯೊಬ್ಬ ಕಾಂಗ್ರೆಸ್ ಟಿಕೆಟ್ ಅರ್ಜಿದಾರರು ಮತದಾರರ ಪರಿಷ್ಕರಣೆ ಹಾಗೂ ಬೂತ್ ಮಟ್ಟದ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಣವಿಕಲ್ಲು, ಚೌಡಾಪುರ ಗ್ರಾಮದಲ್ಲಿ ಸಭೆ ನಡೆಸಿ ಮಾತನಾಡಿದ ಟಿಕೆಟ್ ಆಕಾಂಕ್ಷಿ ಶ್ರೀ ಗುರುರಾಜ್ ನಾಯಕರವರು ಹಿಗೇ ಹೇಳಿದರು ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎನ್ನುವ ಧ್ಯೇಯ ಮಂತ್ರದೊಂದಿಗೆ ನಾನು ಈ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂಬ ಉದ್ದೇಶದಿಂದ ಈ ಕ್ಷೇತ್ರವನ್ನೇ ಯಾಕೆ ಆಯ್ಕೆ ಮಾಡಿಕೊಂಡಿರುವೆ ಎಂದರೆ ಈ ಒಂದು ಕ್ಷೇತ್ರವು,ರಾಜ್ಯದಲ್ಲೇ ಅತಿ ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಕಟ್ಟಿಕೊಂಡಿರುವ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುವುದೇ ನನ್ನ ಗುರಿ ಎಂದು ಹೇಳಿದರು, ಇದೇ ಸಂದರ್ಭದಲ್ಲಿ ಬಣವಿಕಲ್ಲು, ಚೌಡಾಪುರ ಗ್ರಾಮಗಳ ಮತದಾರರು ಹಾಜರಿದ್ದರು..

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
