ಎಐಸಿಸಿ ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ,,,,, ಕೂಡ್ಲಿಗಿಯಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ವತಿಯಿಂದ ಎಐಸಿಸಿ ನೂತನ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭಕ್ಕೆ ಹೊರಡುವ ಸಲುವಾಗಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸಂತೋಷ್ ಲಾಡ್ ಸೋಲಿಲ್ಲದ ಸರದಾರರಾದ ಮಲ್ಲಿಕಾರ್ಜುನ ಖರ್ಗೆಯವರು ಮಾಡಿದ ಸಾಧನೆ ನಮಗೆಲ್ಲ ಮಾದರಿ ಅದಕ್ಕಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನಾ ಸಮಾರಂಭಕ್ಕೆ ಸಜ್ಜಾಗಬೇಕು ಈ ನಿಟ್ಟಿನಲ್ಲಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಜವಾಬ್ದಾರಿಯನ್ನು ತೆಗೆದುಕೊಂಡು ಜನರನ್ನು ಕರೆತರಬೇಕು ಎಂದು ತಿಳಿಸಿದರು, ಇನ್ನೋರ್ವ ಮಾಜಿ ಸಚಿವರು ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಈ ತುಕಾರಾಂ ಅವರು ಮಾತನಾಡಿ ಮಲ್ಲಿಕಾರ್ಜುನ ಖರ್ಗೆಯವರು ನಾಡಿಗೆ ಕೊಟ್ಟಿರುವ ಕೊಡುಗೆ ಇಡೀ ದೇಶ ಮೆಚ್ಚುವಂತೆ ಮಾಡಿ ತೋರಿಸಿದ್ದಾರೆ ಅದಕ್ಕಾಗಿ ತಾವೆಲ್ಲರೂ ಸನ್ನದ್ಧರಾಗಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಅರ್ಜಿದಾರರಾದ ಗುರುರಾಜ್ ನಾಯಕ್, ಜಿಂಕಾಲ್ ನಾಗಮಣಿ, ಗುಜ್ಜಲ್ ರಘು, ಎನ್ ವೆಂಕಟೇಶ್, ಎನ್ ಟಿ ಶ್ರೀನಿವಾಸ್, ಕಾವಲ್ಲಿ ಶಿವಪ್ಪ ನಾಯಕ, ಕೂಡ್ಲಿಗಿ ಮತ್ತು ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ. ಗುರುಸಿದ್ದನಗೌಡ,ಕೆ.ಜಿ.ಕುಮಾರ್ ಗೌಡ ಹಾಗೂ ತಾಲೂಕು ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರು ಹಾಜರಿದ್ದರು..

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
