ಸಿಂಧನೂರು ಕಾರುಣ್ಯ ಆಶ್ರಮದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಅವರು ಪುನೀತ್ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ…!!!

ಸಿಂಧನೂರು ಕಾರುಣ್ಯ ಆಶ್ರಮದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಅವರು ಪುನೀತ್ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ  ದಿನಾಂಕ 25-12-2022 ರಂದು ಚಿತ್ರದುರ್ಗ ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಮಂಜುಶ್ರೀ ಚಾರಿಟೇಬಲ್ ಟ್ರಸ್ಟ್ ಶ್ರೀ ಶಿರಡಿ ಸಾಯಿಬಾಬಾ ಆಶ್ರಮ ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ಆಡಳಿತಾಧಿಕಾರಿಗಳಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಅವರ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮತ್ತು ಅವರ ಅನಾಥಪರ ಸೇವೆಯನ್ನು ಪರಿಗಣಿಸಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮತ್ತು ರಾಜಕೀಯ ಧುರೀಣರ ಗಣ್ಯಾತಿಗಣ್ಯರ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಮಕ್ಷಮದಲ್ಲಿ “ಪುನೀತ್ ಸೇವಾ ರತ್ನ ” ಎನ್ನುವ ಗೌರವಾನ್ವಿತ ರಾಜ್ಯ ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಂಜುಶ್ರೀ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀ ಶಿರಡಿ ಸಾಯಿಬಾಬಾ ಆಶ್ರಮದ ಪದಾಧಿಕಾರಿಗಳ ವತಿಯಿಂದ ಆಯ್ಕೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಆರ್ ಅಶೋಕ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದರಾದ ತೇಜಸ್ವಿ ಸೂರ್ಯ ಬೆಂಗಳೂರು ಬಸವನಗುಡಿಯ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕರಾದ ಟಿ.ಎ. ಶರವಣ ಚಿತ್ರದುರ್ಗ ಜಿಲ್ಲಾ ರೋಟರಿ ಕ್ಲಬ್ ಅಧ್ಯಕ್ಷರಾದ ಮಾಧುರಿ ಮಧು ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಷ್ಠಿತ ಸಂಘ ಸಂಸ್ಥೆಗಳು ಮತ್ತು ಅನೇಕ ಮಹಾನ್ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು..

ವರದಿ. ಉಮೇಶ್, ಎಚ್, ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend