;

ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ: ಪರಿಶೀಲನೆ…!!!

ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ: ಪರಿಶೀಲನೆ

ಬೆಂಗಳೂರು ಗ್ರಾಮಾಂತರ :
ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಬುಧವಾರ  ರಂದು ಭೇಟಿ ನೀಡಿ ಆಹಾರಧಾನ್ಯಗಳ ದಾಸ್ತಾನು,ಗುಣಮಟ್ಟ ಪರಿಶೀಲಿಸಿದರು.

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಹಾಗೂ ಬಿದಲೂರು ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ಥಳೀಯ ಪಡಿತರ ಚೀಟಿದಾರರೊಂದಿಗೆ ಸಂವಾದ ನಡೆಸಿ ನಿಗದಿತ ಪ್ರಮಾಣದ ಆಹಾರ ಧಾನ್ಯಗಳು ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು.ಧಾನ್ಯಗಳ ಗುಣಮಟ್ಟ ಕಾಯ್ದುಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದರು.
ಆಹಾರ ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕಿ ಗಿರಿಜಾದೇವಿ ಮತ್ತಿತರರು ಇದ್ದರು..

ವರದಿ. ಕಲಾವತಿ. ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;