ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಲವಿ ಜಲಾಶಯಕ್ಕೆ ಇಂದು ಸ್ಥಳೀಯ ಶಾಸಕರಾದ ಭೀಮಾ ನಾಯಕ ಅವರ ಜೊತೆಗೂಡಿ ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ ಬಾಗೀನ ಅರ್ಪಿಸಿದರು. ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಲಾಶಯಕ್ಕೆ ನೀರು ತುಂಬಿಸಲು 160 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ್ದ, ಸರ್ಕಾರದ ಪ್ರಯತ್ನದ ಫಲವಾಗಿ 50 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ.
ಬಾಗೀನ ಸಲ್ಲಿಸುವ ವೇಳೆ ಮಾಜಿ ಸಚಿವರಾದ ಸಂತೋಷ್ ಲಾಡ್, ತುಕಾರಾಮ್, ಪರಮೇಶ್ವರ ನಾಯಕ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಕಂಪ್ಲಿ ಗಣೇಶ್, ಬೈರತಿ ಸುರೇಶ್ ಸೇರಿದಂತೆ ಅನೇಕರು ಹಾಜರಿದ್ದರು…

ವರದಿ. ಧನಂಜಯ್ ಹಗರಿಬೊಮ್ಮನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
