ಬೂದು ನೀರು ನಿರ್ವಹಣಾ ಕಾಮಗಾರಿ ಸ್ಥಳಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಜಿ.ವಿ ಭೇಟಿ ಪರಿಶೀಲನೆ
ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ ಮಲಪನಗುಡಿ ಹಾಗೂ ಹೊಸೂರು ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅನುಷ್ಠಾನಗೊಂಡ ಬೂದು ನೀರು ನಿರ್ವಹಣಾ ಕಾಮಗಾರಿ ಸ್ಥಳಕ್ಕೆ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಜಿ.ವಿ ಅವರು ಗುರುವಾರದಂದು ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮದ ಸ್ವಚ್ವತೆಗಾಗಿ ಹಾಗೂ ಗ್ರಾಮಗಳ ಅಭಿವೃದ್ದಿಗಾಗಿ ನರೇಗಾ ಯೊಜನೆಯಲ್ಲಿ ಹಲವಾರು ರೀತಿಯ ವೈಯಕ್ತಿಕ ಕಾಮಗಾರಿಗಳನ್ನು ಸೃಜನೆ ಮಾಡುವುದಕ್ಕೆ ಅವಕಾಶವಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿಯ ಅಭಿವೃದ್ದಿ ಅಧಿಕಾರಿಗಳಾದ ಬಿ.ಗಂಗಾಧರ ಅವರು ಮಾತನಾಡಿ, ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ ಗ್ರಾಮ ಪಂಚಾಯಿತಿಗಳಿಗೆ ನರೇಗಾ ಯೋಜನೆಯಿಂದ ಲೋಕೊಪಯೋಗಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲು ಅವಕಾಶವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರಾಘುನಾಯ್ಕ ಹಾಗೂ ಇತರರು ಇದ್ದರು.

ವರದಿ. ಗಣೇಶ್, ಬಿ, ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
