ಕ್ಯಾಸನಕೇರಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣ ಮಾಯವಾಗಿದೆ?? ಕೂಡ್ಲಿಗಿ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50,ರಲ್ಲಿ ಪೂನ ಟೂ ಬೆಂಗಳೂರು ಹಾದು ಹೋಗುವ ಕ್ಯಾಸನಕೇರಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣವೇ ಮಾಯವಾಗಿದೆ ಎಂಬುದು ಇಲ್ಲಿನ ಜನರ ಪ್ರಶ್ನೆಯಾಗಿದೆ? ಕಾರಣ ಈ ಗ್ರಾಮವು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಚೌಡಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಯಾಗಿರುವುದರಿಂದ.ಮತ್ತು ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ, ಸುಮಾರು 10 ರಿಂದ ,15 ಹಳ್ಳಿಗಳ ಜನರು ಪ್ರತಿದಿನ ಸಾಕಷ್ಟು ಪ್ರಯಾಣಿಕರು ಈ ಗ್ರಾಮದಿಂದ ಕೂಗಳತೆ ದೂರದಲ್ಲಿರುವ ತಾಲೂಕು ಕೇಂದ್ರವಾದ ಕೂಡ್ಲಿಗಿಗೆ ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೋಗುತ್ತಾರೆ. ಆದರೆ ರಸ್ತೆಯ ಒಂದು ಭಾಗದಲ್ಲಿ ಮಾತ್ರ ಬಸ್ ನಿಲ್ದಾಣವಿರುತ್ತದೆ. ಆದರೆ ಈ ನಿಲ್ದಾಣದ ಮುಂದೆ ಖಾಸಗಿಯವರ ಅಂಗಡಿ ಇರುವುದರಿಂದ. ಅದು ಇದ್ದರೂ ಇಲ್ಲದಂತಾಗಿದೆ, ಅದಕ್ಕಾಗಿ ಕೂಡಲೇ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒ, ಜನಪ್ರತಿನಿಧಿಗಳು ಇದನ್ನು ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಈ ಬಸ್ ನಿಲ್ದಾಣವನ್ನು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿ ಮಾಡಿದ ಪ್ರಯಾಣಿಕರು…

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
