;

ಲೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ…!!!

ಲೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಮುಖ್ಯ ಗುರುಗಳಿಂದ ಧ್ವಜ ಹಾರಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು..

ನಂತರ ಅಸಂಘಟಿತ ಕಾರ್ಮಿಕರ ವಿಭಾಗದ ವಿಜಯನಗರ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ. ವಿದ್ಯಾರ್ಥಿಗಳೆಲ್ಲರೂ ಹೆಚ್ಚಿನ ಮಟ್ಟಕ್ಕೆ ವಿದ್ಯಾಭ್ಯಾಸ ವೋಟ್ ಮಾಡಿ ನಿಮ್ಮ ಜೀವನಕ್ಕೆ ಒಂದು ನೆಲೆ ಕಂಡುಕೊಳ್ಳಬೇಕು . ನಿಮ್ಮ ತಂದೆ ತಾಯಂದಿರು ಕಷ್ಟದಿಂದ ದುಡಿದು ನಿಮ್ಮ ವಿದ್ಯಾಭ್ಯಾಸದ ಕಡೆ ಒತ್ತು ಕೊಡುತ್ತಾರೆ. ಅದರಂತೆ ಮುಂದಿನ ದಿನಗಳಲ್ಲಿ. ನಿಮ್ಮ ತಂದೆ ತಾಯಿಗಳಿಗೆ ನೆಲೆಯಾಗಬೇಕೆಂದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಸ್ವಾಗತ ಭಾಷಣ ಹಾಗೂ ಕಾರ್ಯಕ್ರಮವನ್ನು ಮುಖ್ಯ ಗುರುಗಳಾದ ಕೃಷ್ಣಪ್ಪ ರವರು ನೆರವೇರಿಸಿ ಕೊಟ್ಟರು..

ಎಸ್ ಡಿ ಎಂ ಸಿ ಅಧ್ಯಕ್ಷರಿಂದ ಗಣಿತ ಸ್ಪರ್ಧೆಯಲ್ಲಿ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಸಿ ಸಿಹಿ ಹಂಚಿದರು.

ಈ ದಿನಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ದುರ್ಗಮ್ಮ ದುರ್ಗಪ್ಪ. ಶಾಲೆಯ. ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಂದ್ರಪ್ಪ. ಶಾಲೆ ಎಲ್ಲಾ ಶಿಕ್ಷಕರುಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು. ವಿದ್ಯಾರ್ಥಿಯ ತಂದೆ-ತಾಯಿಗಳು ಊರಿನ ಮುಖಂಡರು ಈ ಒಂದು ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಬಂದು ಯಶಸ್ವಿ ಮಾಡಿದರು..

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;