;

ಮಡಿವಾಳ ಮಾಚಿದೇವರ ಜಯಂತಿ ಆಚರಣೆ…!!!

ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹಾರಕಬಾವಿ ಗ್ರಾಮ ಪಂಚಾಯತಿಯ ವತಿಯಿಂದ
12ನೇ ಶತಮಾನದ ಬಸವಣ್ಣನವರ
ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು
ಒಬ್ಬರಾಗಿದ್ದಾರೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಿ ವೀರಣ್ಣ ಹೇಳಿದರು. ತಾಲೂಕಿನ ಹಾರಕಬಾವಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಡಿವಾಳ‌ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಪೂಜಿ ಸಲ್ಲಿಸಿ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ‌ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. 12ನೇ ಶತಮಾನದ ಕಾಲದಲ್ಲಿ ಇಂತಹ‌ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಶ್ರೀಮತಿ ಮೂಗಮ್ಮ, ಉಪಾಧ್ಯಕ್ಷರಾದ ಶೇಖರಪ್ಪ ಹಾಗೂ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಸಿಬ್ಬಂದಿಗಳು, ಸಮಾಜದವರು ಇದ್ದರು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;