ಸಿಎಂ ಬೊಮ್ಮಾಯಿ ಘೋಷಣೆ ಮಾಡಿರುವ ಹೊಸ ಯೋಜನೆಗಳು
ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ :
ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ, ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ, ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಹಾಯ, ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಂಪೂರ್ಣ ಶುಲ್ಕ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
‘ಗೃಹಿಣಿ ಶಕ್ತಿ’ ಯೋಜನೆ
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಧೈಯೋದ್ದೇಶವನ್ನು ಮುಂದುವರೆಸುತ್ತಾ ನಮ್ಮ ಸರ್ಕಾರವು ‘ಗೃಹಿಣಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ.
ಇದರಡಿಯಲ್ಲಿ ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.
ಅನುಪಾಲನ ಗೃಹ ನಿರ್ಮಾಣ
18 ರಿಂದ 21 ವರ್ಷದೊಳಗಿನ ಅನಾಥ ಹೆಣ್ಣು ಮಕ್ಕಳ ಆರೈಕೆಗೆ 6 ಹಾಸ್ಟೆಲ್. ರಾಜ್ಯದಲ್ಲಿ ಮೊದಲ ಬಾರಿ ಅನಾಥ ಗಂಡು ಮಕ್ಕಳಿಗೂ 4 ಅನುಪಾಲನಾ ಗೃಹ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ 2 ಕೋಟಿ ರೂ. ಗಳ ಅನುದಾನ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
‘ಭೂ ಸಿರಿ’ ಯೋಜನೆ
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ‘ಭೂ ಸಿರಿ’ ಎಂಬ ನೂತನ ಯೋಜನೆಯಡಿ 2023-24 ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.
‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ
‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ
ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ
‘ಬದುಕುವ ದಾರಿ’ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ
ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ ತಲಾ 2 ಸಾವಿರ ರೂ.
‘ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
ಜೀವನಜ್ಯೋತಿ 56 ಲಕ್ಷ ಸಣ್ಣ, ಅತಿಸಣ್ಣ ರೈತ ಕುಟುಂಬಗಳಿಗೆ ವಿಮಾ ಸೌಲಭ್ಯ ಕಲ್ಪಿಸಲು 180 ಕೋಟಿ ರು. ವೆಚ್ಚದ ಯೋಜನೆ
ಮನೆಮನೆಗೆ ಆರೋಗ್ಯ ಹಳ್ಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ವರ್ಷಕ್ಕೆ 2 ಬಾರಿ ಆರೋಗ್ಯ ಶಿಬಿರ ಆಯೋಜನೆ. ತನ್ಮೂಲಕ ಗ್ರಾಮೀಣರ ರೋಗಗಳ ಪತ್ತೆಗೆ ಒತ್ತು
ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಪ್ರತಿ ಜಿಲ್ಲೆಯಲ್ಲಿ ಎಲ್ಲ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡ ಜಾನಪದ ಹಬ್ಬ ಆಚರಣೆ
ವಾತ್ಸಲ್ಯ 6 ವರ್ಷದೊಳಗಿನ ತಪಾಸಣೆಯನ್ನು ವರ್ಷಕ್ಕೆ 2 ಬಾರಿ ನಡೆಸಲು ಯೋಜನೆ. ಗ್ರಾಮೀಣ ಮಕ್ಕಳ ಆರೋಗ್ಯ ಜೀವ ಸುಧೆ ಸ್ತನ, ಬಾಯಿ, ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ರಾಜ್ಯಾದ್ಯಂತ ವ್ಯಾಪಕ ಕ್ಯಾನ್ಸರ್ ತಪಾಸಣಾ ಶಿಬಿರ
ರೈತ ಉನ್ನತಿ’ ಸಿರಿಧಾನ್ಯಗಳ ಸಂಸ್ಕರಣೆ, ಗ್ರೇಡಿಂಗ್, ಪ್ಯಾಕಿಂಗ್ ಮಾಡುವ ಉತ್ಪಾದಕ ಸಂಸ್ಥೆಗಳಿಗೆ ಸಹಾಯಧನದ ಯೋಜನೆ
ಬದುಕುವ ದಾರಿ ಶಾಲಾ ಶಿಕ್ಷಣದ ನಂತರ ಓದಲು ಸಾಧ್ಯವಾಗದವರು ಐಟಿಐಗಳಲ್ಲಿ 3 ತಿಂಗಳ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1500 ಶಿಷ್ಯ ವೇತನ
ನಮ್ಮ ನೆಲೆ ಗೃಹ ಮಂಡಳಿ ಅಭಿವೃದ್ಧಿಪಡಿಸುವ ನಿವೇಶನ ಪೈಕಿ ಮೂರನೇ 1 ಭಾಗ ಆರ್ಥಿಕ ದುರ್ಬಲ ವರ್ಗದವರಿಗೆ ಹಂಚಿಕೆ
ಸ್ವಚೇತನ ಅರ್ಹ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡಲು ಬಜೆಟ್ನಲ್ಲಿ 50 ಕೋಟಿ ರು. ನಿಗದಿ ಇದು ಸಿ ಎಂ, ಬೊಮ್ಮಾಯಿಯವರ 2ನೇ ಬಜೆಟ್ ಮಂಡನೆಯಾಗಿದೆ..

ವರದಿ. ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
