;

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಕ್ರಮ ಕೈಗೊಳ್ಳಿ : ಕರಡಿ ಸಂಗಣ್ಣ…!!!

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಕ್ರಮ ಕೈಗೊಳ್ಳಿ : ಕರಡಿ ಸಂಗಣ್ಣ

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ 450 ಬೆಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರು ಆಗಿರುವ ಸಂಸದರಾದ ಕರಡಿ ಸಂಗಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಫೆ.28ರಂದು ಏರ್ಪಡಿಸಲಾದ ಕೇಂದ್ರ ಪುರಷ್ಕೃತ ಯೋಜನೆಗಳ 2022-23ನೇ ಸಾಲಿನ 2022ರ ಅಕ್ಟೋಬರ್ ದಿಂದ 2022ರ ಡಿಸೆಂಬರ್ ಅಂತ್ಯದವರೆಗಿನ 3ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಜಿಲ್ಲಾಸ್ಪತ್ರೆ ಮತ್ತು ಗಂಗಾವತಿ, ಯಲಬುರ್ಗಾ ಹಾಗೂ ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಆಕ್ಸಿನ್ ಪ್ಲ್ಯಾಂಟ್‌ಗಳನ್ನು ಸಹ ಶೀಘ್ರ ಉದ್ಘಾಟಿಸಿ, ಇದರ ಸೇವೆಯನ್ನು ಜಿಲ್ಲೆಯ ಸಾರ್ವಜನಿಕರಿಗೆ ಸಿಗುವಂತಾಗಬೇಕು. ಜಿಲ್ಲಾ ಕೇಂದ್ರದಲ್ಲಿ ಸಾರ್ವಜನಿಕ ಸಿಟಿ ಸ್ಕ್ಯಾನ್ ಸೇವೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಹಾಗೂ ಕೊಪ್ಪಳ ಕಿಮ್ಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಆಯುಷ್ಮಾನ್ ಭಾರತ್ ಯೋಜನೆಯಡಿ ಈಗಾಗಲೇ ಕಾರ್ಡ್ ಪಡೆದಿರುವ ಫಲಾನುಭವಿಗಳು ಹೆಚ್ಚಿನ ಅಥವಾ ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿ ಅಥವಾ ಪಕ್ಕದ ಜಿಲ್ಲೆಗಳಿಗೆ ಹೋಗುತ್ತಾರೆ. ಇದಕ್ಕಾಗಿ ಜಿಲ್ಲಾಸ್ಪತ್ರೆಯಿಂದ ಶಿಫಾರಸ್ಸು ಪತ್ರ ನೀಡಬೇಕಿದೆ. ಕೆಲವೊಮ್ಮೆ ತುರ್ತು ಸಂದರ್ಭದಲ್ಲಿ ಶಿಫಾರಸ್ಸು ಪತ್ರ ತೆಗೆದುಕೊಳ್ಳದೇ ಹೋಗಿರುತ್ತಾರೆ. ಅಂತಹ ಸಂದರ್ಭದಲ್ಲಿ ವಿನಾಃ ಕಾರಣ ಸತಾಯಿಸದೇ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ರೋಗಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಪತ್ರವನ್ನು ಕೂಡಲೇ ನೀಡಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ಜಿಲ್ಲಾಸ್ಪತ್ರೆಯಲ್ಲಿ ಡ್ರೈನೆಜ್, ಯುಜಿಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಅಲ್ಲದೇ ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಸಂಸದರು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರು ತಮ್ಮ ಜಮೀನುಗಳಲ್ಲಿ ತೆಂಗು, ಮಾವು ಇತರೆ ತೋಟಗಾರಿಕೆ ಗಿಡಗಳನ್ನು ಬೆಳೆಯುವುದರ ಜೊತೆಗೆ ಶ್ರೀಗಂಧ, ರಕ್ತಚಂದನ, ಸಾಗವಾನಿ ಸೇರಿದಂತೆ ಇತರ ಲಾಭದಾಯಕ ಗಿಡ-ಮರಗಳನ್ನು ಬೆಳೆಯುವಂತೆ ಅರಿವು ಮೂಡಿಸಬೇಕು ಹಾಗೂ ಈ ಬಗ್ಗೆ ಅವರಿಗೆ ನರ್ಸರಿಗಳ ಮೂಲಕ ರೀಯಾಯಿತಿ ದರಗಳಲ್ಲಿ ಸಸಿಗಳನ್ನು ನೀಡುವ ವ್ಯವಸ್ಥೆ ಮಾಡಿ. ಇದಲ್ಲದೇ ಜಿಲ್ಲಾ ಪಂಚಾಯತ್ ನರೇಗಾ, ಪ್ರಾದೇಶಿಕ ಅರಣ್ಯ ಇಲಾಖೆ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ಸೇರಿ ರೈತರಿಗೆ ಮಾಹಿತಿ ನೀಡುವ ಒಂದು ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದರು.
ಹೊಸ ಬೆಳಕು ಯೋಜನೆಯಡಿ ಪ್ರತಿ ಮನೆಗಳಿ ವಿದ್ಯುತ್ ಸೌಲಭ್ಯ ನೀಡುವ ಸರ್ಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು. ಸುಟ್ಟು ಹೋದ ಟಿಸಿಗಳನ್ನು 24 ಗಂಟೆಯೊಳಗೆ ಬದಲಾವಣೆ ಮಾಡಿಸಿಕೊಡಬೇಕು. ಬಿಸಿಗೆಯ ಬೆಳೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಅಮೃತ ಜೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಸಹ ಸಮರ್ಪಕವಾಗಿ ಜಾರಿ ಮಾಡಬೇಕು. ರೈತರು ತಮ್ಮ ಜಮೀನಿನ ಬೋರ್ವೆಲ್‌ಗಳಿಗೆ ಸೋಲಾರ್ ಪಂಪ್ಸೆಟ್ ಅಳವಡಿಸುವ ಕುರಿತಂತೆ ಸೂಕ್ತ ಅರಿವು ಮೂಡಿಸಬೇಕು ಎಂದರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಫಘಾತ ಸ್ಥಳಗಳನ್ನು ಗುರಿತಿಸಿ, ಅಂತಹ ಪ್ರದೇಶಗಳಲ್ಲಿ ಎಚ್ಚರಿಕಾ ಸಂದಶೆಗಳು, ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಕುರಿತಂತೆ ಸಾರಿಗೆ, ಲೋಕೋಪಯೋಗಿ, ಎನ್.ಹೆಚ್.ಎ.ಐ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆದ ಅರ್ಹ ಫಲಾನಿಭವಿಗಳನ್ನು ಗುರುತಿಸಲು ಆಯಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಸೂಚನೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಜಿಪಂನ ಉಪ ಕಾರ್ಯದರ್ಶಿಗಳಾದ ಸಮೀರ್ ಮುಲ್ಲಾ, ಜಿಪಂ ಯೋಜನಾ ನಿರ್ದೇಶಕರಾದ ಟಿ.ಕೃಷ್ಞಮೂರ್ತಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು…

ವರದಿ. ಸಂಗೀತ ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;