;

ಕಲ್ಯಾಣ ಕರ್ನಾಟಕ ಉತ್ಸವ: ಸ್ತಬ್ಧಚಿತ್ರ ಪ್ರದರ್ಶನ ಕೊಪ್ಪಳ ಜಿಲ್ಲೆಗೆ ಪ್ರಥಮ ಬಹುಮಾನ : ಸಿಇಒ ಸಂತಸ…!!!

ಕಲ್ಯಾಣ ಕರ್ನಾಟಕ ಉತ್ಸವ: ಸ್ತಬ್ಧಚಿತ್ರ ಪ್ರದರ್ಶನ
ಕೊಪ್ಪಳ ಜಿಲ್ಲೆಗೆ ಪ್ರಥಮ ಬಹುಮಾನ : ಸಿಇಒ ಸಂತಸ

ಕೊಪ್ಪಳ : ಕಲ್ಯಾಣ ಕರ್ನಾಟಕ ಉತ್ಸವ-2023ರ ಸ್ತಬ್ಧಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಿಸಿದ್ದ ಕೊಪ್ಪಳ ಜಿಲ್ಲೆಯ ಸ್ಪಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಕೊಪ್ಪಳ ಜಿಲ್ಲಾ ಪಂಚಾಯತಿ ವತಿಯಿಂದ “ಕಿನ್ನಾಳ ಕಲೆ ಹಾಗೂ ಕೈಮಗ್ಗ” ವಿಷಯ ಆಧಾರಿತ ಸ್ತಬ್ಧಚಿತ್ರವನ್ನು ಕಳುಹಿಸಿಕೊಡಲಾಗಿತ್ತು. ಸ್ತಬ್ಧಚಿತ್ರವು ತುಂಬಾ ಆಕರ್ಷನೀಯಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪೈಕಿ ಕೊಪ್ಪಳ ಜಿಲ್ಲೆಯು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.
ಜಿಲ್ಲೆಯ ಕಲೆ, ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವ ಸ್ತಬ್ಧಚಿತ್ರ ನಮ್ಮದಾಗಿದ್ದು, ಹಾಗಾಗಿ ನಮ್ಮ ಜಿಲ್ಲೆಗೆ ಮೊದಲ ಪ್ರಶಸ್ತಿ ಸಿಕ್ಕಿದ್ದು, ಹರ್ಷವೆನಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಹಾಗೂ ಸ್ತಬ್ಧಚಿತ್ರದ ನೋಡಲ್ ಅಧಿಕಾರಿಗಳಾದ ಭಾರತಿ ಬಿದರಿಮಠ ಉಪಸ್ಥಿತರಿದ್ದು, ಸಬ್ಧಚಿತ್ರ ನಿರ್ಮಿಸಿದ ಕಲಾವಿದರಾದ ರಂಗನಾಥ ಡಿ.ಕೆ ಅವರಿಗೆ ಅಭಿನಂದನೆ ಸಲ್ಲಿಸಿದರು…

ವರದಿ. ಸಂಗೀತ ಪಾಟೀಲ್, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;