96, ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ವಿಜಯನಗರ ಜಿಲ್ಲೆಯ ಚುನಾವಣಾ ಅಧಿಕಾರಿ ಮಾನ್ಯ ಈರಪ್ಪ ಬಿರಾದಾರ್ ಭೇಟಿ ನೀಡಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು!!!! ಕೂಡ್ಲಿಗಿ: ತಾಲೂಕಿನ ಮಿನಿ ವಿಧಾನಸೌಧದಲ್ಲಿ ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಚುನಾವಣಾ ಅಧಿಕಾರಿಗಳಾದ ಮಾನ್ಯ ಈರಪ್ಪ ಬಿರಾದಾರ್ ಆಯುಕ್ತರು ನಗರಾಭಿವೃದ್ಧಿ ಪ್ರಾಧಿಕಾರ ಹೊಸಪೇಟೆ ಹಾಗೂ ವಿಶೇಷ ಕರ್ತವ್ಯ ಅಧಿಕಾರಿಗಳು ಡಿ ಎಂ ಎಫ್ ಇವರು, 96 ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡ್ಲಿಗಿ , ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೂಡ್ಲಿಗಿ ಮತ್ತು ಮಾಸ್ಟರ್ ಟ್ರೈನರ್ ಗಳಿಗೆ ಮಾನ್ಯ ತಹಸೀಲ್ದಾರರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು , ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚಿಸಲಾಯಿತು. ನಂತರ ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಸ್ಟ್ರಾಂಗ್ ರೂಮ್ ಮತ್ತು ಮಾಸ್ಟರಿಂಗ್, ಡಿ ಮಾಸ್ಟರಿಂಗ್ ಸ್ಥಳವನ್ನು ಪರಿಶೀಲನೆ ಮಾಡಿದರು. ತಹಸೀಲ್ದಾರರಾದ ಮಾನ್ಯ ಟಿ. ಜಗದೀಶ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು…

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
