;

ಕೂಡ್ಲಿಗಿ: ವಿಜಯ ಸಂಕಲ್ಪ ಯಾತ್ರೆಗೆ ಪೂರ್ವಭಾವಿ ಸಭೆ…!!!

ಕೂಡ್ಲಿಗಿ: ವಿಜಯ ಸಂಕಲ್ಪ ಯಾತ್ರೆಗೆ ಪೂರ್ವಭಾವಿ ಸಭೆ

ಕೂಡ್ಲಿಗಿ: ಮಾರ್ಚ್‌ 15 ರಂದು ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಯ ಕೂಡ್ಲಿಗಿ ಪಟ್ಟಣಕ್ಕೆ ಆಗಮಿಸಲಿದ್ದು, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರು ಕೆ ಚೆನ್ನಪ್ಪ ಮಾತನಾಡಿ, ಮಾರ್ಚ್‌ 15ರಂದು ಕೂಡ್ಲಿಗಿ ಪಟ್ಟಣದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಇನ್ನು ಪಟ್ಟಣದ ಪ್ರವಾಸಿ ಪ್ರವಾಸಿ ಮಂದಿರ ಆವರಣದಿಂದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ವರೆಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದರು. ಸಮಾವೇಶದಲ್ಲಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಾರಿಗೆ ಸಚಿವರಾದ ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಸಚಿವರಾದ ಆನಂದ್ ಸಿಂಗ್ ಜಿಲ್ಲಾ ಅಧ್ಯಕ್ಷರಾದ ಚನ್ನಬಸವನಗೌಡರು ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಲಿ ದ್ದಾರೆ ಎಂದರು. ಈ ಸಂದರ್ಭದಲ್ಲಿ ಬಂಗಾರು ಹನುಮಂತು ಎಸ್ ಟಿ ಮೋರ್ಚದ ರಾಜ್ಯ ಕೋಶ ಅಧ್ಯಕ್ಷರು, ಸೂರ್ಯ ಪಾಪಣ್ಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಎಸ್ ದುರ್ಗೇಶ್ ಪವಿತ್ರ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು..

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;