;

ಫ್ರೀಶೀಫ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಕಾಲೇಜ್ ಪ್ರವೇಶಾತಿ ಸಮಯದಲ್ಲಿ ಶುಲ್ಕ ಪಡೆಯದಂತೆ ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ರವರಿಗೆ ಮನವಿ,..!!!

ಫ್ರೀಶೀಫ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಕಾಲೇಜ್ ಪ್ರವೇಶಾತಿ ಸಮಯದಲ್ಲಿ ಶುಲ್ಕ ಪಡೆಯದಂತೆ ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ರವರಿಗೆ ಮನವಿ,

ವಿಜಯನಗರ: ಭಾರತ ಸರ್ಕಾರದ ಮೆಟ್ರಿಕ್ ನಂತರದ ಮಾರ್ಗ ಸೂಚಿ ಅನ್ವಯ ಫ್ರೀಶೀಫ್ ಕಾರ್ಡ್ ವ್ಯವಸ್ಥೆ ಜಾರಿಗೆ ತಂದಿದ್ದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಂತೆ ವೆಂಕಟೇಶ್ ಟಿ ವಿಜಯನಗರ ಜಿಲ್ಲಾಧಿಕಾರಿಗಳಿಗೆ ದೊಡ್ಡ ಬಸವರಾಜ್ ಬಡಗಿ ರವರು ಮನವಿ ಸಲ್ಲಿಸಿದರು ,

ನಂತರ ಮಾತನಾಡಿ ಭಾರತ ಸರ್ಕಾರದ ಮೆಟ್ರಿಕ್ ನಂತರದ ಮಾರ್ಗಸೂಚಿ ಅನ್ವಯ ಫ್ರೀಶೀಫ್ ಕಾರ್ಡ್ ವ್ಯವಸ್ಥೆ ಜಾರಿಗೆ ತಂದಿದ್ದು ಫ್ರೀಶೀಫ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆಯನ್ನು ಹೊಂದಿದ್ದು. ಸರ್ಕಾರಿ ಸಂಸ್ಥೆ ಅಥವಾ ಖಾಸಗಿ ಸಂಸ್ಥೆಯಾಗಲಿ ಸಾದರ ವಿದ್ಯಾರ್ಥಿಗಳಿಂದ ದಾಖಲಾತಿ ಸಮಯದಲ್ಲಿ ಯಾವುದೇ ಶುಲ್ಕ ಪಾವತಿಸಲು ಒತ್ತಾಯ ಮಾಡದಂತೆ ನಿರ್ದೇಶನ ಬರುತ್ತದೆ ಎಂಬ ಮಾಹಿತಿಯನ್ನು ಈ ಸಂಬಂಧ ಭಾರತ ಸರ್ಕಾರ ಸರ್ಕಾರದ ಮಾರ್ಗಸೂಚಿ 2020 -21 ರಿಂದ 2025- 26ರವರೆಗೆ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.
ರಾಜ್ಯದ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಮತ್ತು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಮುಂಗಡವಾಗಿ ಶುಲ್ಕವನ್ನು ಪಾವತಿಸುವಂತೆ ಒತ್ತಾಯಿಸುತ್ತಿರುವುದು ಕಂಡು ಬಂದಿರುತ್ತದೆ 2019 -20ನೇ ಸಾಲಿನಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಪೋರ್ಟಲ್ ಅಭಿವೃದ್ಧಿ ಪಡಿಸಿದ್ದು. ವಿದ್ಯಾರ್ಥಿಗಳ ಶೈಕ್ಷಣಿಕ ವಿವಾರಗಳನ್ನು ಶಿಕ್ಷಣ ಇಲಾಖೆಯ ಎಸ್ ಎ ಟಿ ಎಸ್ ದತ್ತಾಂಶದಿಂದ ಪಡೆಯಲಾಗುತ್ತದೆ ಮತ್ತು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಈ ದೃಢೀಕರಣ ಅಧಿಕಾರಗಳನ್ನು ನೇಮಕ ಮಾಡಲಾಗಿದೆ.
ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಹೊಂದಿರುವ ಎಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾ ದೃಷ್ಟಿಯಿಂದ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಡೀಮ್ಡ್ ವಿಶ್ವವಿದ್ಯಾಲಯ ಖಾಸಗಿ ವಿಶ್ವವಿದ್ಯಾಲಯ ಸರಕಾರಿ ಅನುದಾನಿತ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಕಾಲೇಜು ಶುಲ್ಕಗಳನ್ನು ಪಡೆಯದಂತೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನವನ್ನು ನೀಡುವುದು ಸೂಕ್ತವೆಂದು ಸರ್ಕಾರವು ಮನಗಂಡಿರುತ್ತದೆ,

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾದೃಷ್ಟಿಯಿಂದ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಆದರೆ ಕೆಲವು ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದು ವಿಳಂಬವಾಗುತ್ತಿದೆ ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶುಲ್ಕ ಪಾವತಿಸುವಂತೆ ಒತ್ತಾಯಿಸುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಅಲ್ಲದೆ ವಿದ್ಯಾರ್ಥಿ ವೇತನವು ಕೆಲವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ದಾರಿ ದೀಪವಾಗಿರುತ್ತದೆ ಅನೇಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಅಸಹಾಯಕರಾಗಿರುತ್ತಾರೆ. ಶಿಕ್ಷಣ ಸಂಸ್ಥೆಗಳ ಈ ಒಂದು ಒತ್ತಾಯದಿಂದ ಶುಲ್ಕ ಪಾವತಿಸಲು ಸಾಧ್ಯವಾಗದೆ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೋಟಕುಗೊಳಿಸುವ ಸಾಧ್ಯತೆ ಇರುತ್ತದೆ ಆದದರಿಂದ ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಡೀಮ್ಡ್ ವಿಶ್ವವಿದ್ಯಾಲಯ ಖಾಸಗಿ ವಿಶ್ವವಿದ್ಯಾಲಯ ಸರ್ಕಾರಿ ಅನುದಾನಿತ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅವರ ಪ್ರವೇಶಾತಿ ಸಮಯದಲ್ಲಿ ಕಾಲೇಜು ಹುಡುಕಗಳನ್ನು ಒತ್ತಾಯಿಸಬಾರದೆಂದು ತಾವು ವಿಜಯನಗರ ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಬೇಕೆಂದು ಮನವಿ ಸಲ್ಲಿಸಿದರು,..

ವರದಿ. ಗಣೇಶ್. ಕೆ. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *