;

ಮತಗಟ್ಟೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ: ಪರಿಶೀಲನೆ…!!!

ಮತಗಟ್ಟೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ: ಪರಿಶೀಲನೆ

ಕೊಪ್ಪಳ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಾರ್ಚ್ 17 ರಂದು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದರು.


ಕೊಪ್ಪಳ ವಿಧಾನಸಭಾ ಕ್ಷೇತ್ರದ ಹುಲಿಗಿ, ಗಿಣಿಗೇರಾ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ವಡ್ಡರಹಟ್ಟಿ ಗ್ರಾಮಗಳಲ್ಲಿನ ಮತಗಟ್ಟೆಗಳ ಸ್ಥಳಗಳಿಗೆ ಭೇಟಿ ನೀಡಿ ಮತಗಟ್ಟೆಗಳಲ್ಲಿ ಮೂಲಭೌತ ಸೌಕರ್ಯಗಳಾದ ಕುಡಿಯುವ ನೀರಿನ ಸೌಲಭ್ಯ, ರ‍್ಯಾಂಪ್, ಶೌಚಾಲಯ, ವಿದ್ಯುತ್ ಸಂಪರ್ಕಗಳಿರುವ ಬಗ್ಗೆ ಪರಿಶೀಲನೆ ಮಾಡಿದರು.
ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಕೈಗೊಳ್ಳಲಾಗುತ್ತಿರುವ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ಮತ್ತು ಇವಿಎಂ-ವಿವಿಪ್ಯಾಟ್‌ಗಳ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆಯೂ ಸಹ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು..

ವರದಿ. ಸಂಗೀತ ಪಾಟೀಲ್. ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;