ಪ್ರದೇಶ ಕಾಂಗ್ರೆಸ್ ಸಮಿತಿಯ ಓ.ಬಿ.ಸಿ.ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಮಧುಸೂಧನ್ ಆರ್ ಕಲ್ಮಡಿ ನೇಮಕ
ಕಾನ ಹೊಸಹಳ್ಳಿ : ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಕೊಟ್ಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಕೆ.ವಿ ರವೀಂದ್ರನಾಥ ಬಾಬು ಇವರ ದ್ವಿತೀಯ ಪುತ್ರ ಶ್ರೀ ಮಧುಸೂಧನ್. ಆರ್ ಕಲ್ಮಡಿ ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಇವರ ಅನುಮೋದನೆ ಮೇರೆಗೆ ರಾಜ್ಯ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಮಧು ಬಂಗಾರಪ್ಪ ಇವರು ನೇಮಕ ಮಾಡಿ ಚಿಕ್ಕಜೋಗಿಹಳ್ಳಿ ಗ್ರಾಮದ ಶ್ರೀ. ಎಸ್.ಮಧುಸೂಧನ್ ಆರ್ ಕಲ್ಮಡಿ ಇವರಿಗೆ ಆದೇಶ ಪತ್ರ ನೀಡಿದ್ದಾರೆ
ಪಕ್ಷದ ಹಾಗೂ ರಾಜ್ಯ- ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯನ್ಮುಖರಾಗಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ..

ವರದಿ. ವಿರೇಶ್. ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
