ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸoಹಿತಿಯ ಜಾರಿಯಲ್ಲಿ ಇರುವ ಪ್ರಯುಕ್ತ ಏಪ್ರಿಲ್ 5ರಂದು ಜಗಜೀವನರಾಂ ಅವರ 116ನೇ ಹಾಗೂ ಏಪ್ರಿಲ್ 14ರಂದು ಡಾ”ಬಿ, ಆರ್, ಅಂಬೇಡ್ಕರ್ ಅವರ 132ನೇಯ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ಕೂಡ್ಲಿಗಿ ತಾಲೂಕಿನ ತಹಶೀಲ್ದಾರರಾದ, ಟಿ, ಜಗದೀಶ್ ರವರು ಹಾಗೂ ಅಧ್ಯಕ್ಷರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕೂಡ್ಲಿಗಿ ಇವರು ತಿಳಿಸಿದ್ದಾರೆ ತಾಲೂಕ್ ಆಡಳಿತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೂಡ್ಲಿಗಿ ಪಟ್ಟಣದ ತಹಸೀಲ್ದಾರ್ ರವರ ಕಚೇರಿಯಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 10:00 ಗಂಟೆಗೆ ಡಾ”ಬಾಬು ಜಗಜೀವನರಾಂ ರವರ ಭಾವಚಿತ್ರಕ್ಕೆ ಪೂಜೆ ಮಾಲಾರ್ಪಣೆ ಹಾಗೂ ಏಪ್ರಿಲ್ 14ರಂದು ಬೆಳಿಗ್ಗೆ 10:00ಗೆ ಡಾ”ಬಿ,ಆರ್,ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಜಯಂತಿಗಳನ್ನು ಆಚರಿಸಲಾಗುವುದು ಎಂದು ತಿಳಿಸಿದ್ದಾರೆ. ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮತ್ತು ಶಾಲಾ ಕಾಲೇಜುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಎಲ್ಲಾ ಕೇಂದ್ರ ಕಚೇರಿಗಳಲ್ಲಿ ಕಡ್ಡಾಯವಾಗಿ ಮಹಾನ್ ಪುರುಷರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಬೇಕೆಂದು ತಿಳಿಸಿದ್ದಾರೆ…

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
