ಕಾಂಗ್ರೆಸ್ ಟಿಕೆಟ್ ಘೋಷಣೆ ಹಿನ್ನೆಲೆ ; ಶ್ರೀ ಪ್ರಸನ್ನ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್.ಆಂಜನೇಯ.
ಹೊಳಲ್ಕೆರೆಯ ಐತಿಹಾಸಿಕ ಶ್ರೀ ಪ್ರಸನ್ನ ಗಣಪತಿಗೆ ಹೊಳಲ್ಕೆರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಹೆಚ್.ಆಂಜನೇಯ ಅವರು ಇಂದು ಮಾಜಿ ಶಾಸಕರಾದ ಎ.ವಿ.ಉಮಾಪತಿ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಟಿ.ಹನುಮಂತಪ್ಪ, ಮತ್ತು ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಪ್ರಕಾಶ್ ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆಯ ನಂತರ ನೆರೆದಿದ್ದ ಅಪಾರ ಜನಸ್ತೋಮದ ನಡುವೆ ಆಂಜನೇಯ ಅವರು ಅತ್ಯಂತ ಭಕ್ತಿಯಿಂದ ಈಡುಗಾಯಿ ಹೊಡೆಯುವ ಮೂಲಕ ಗಣಪತಿ ದೇವಸ್ಥಾನದಿಂದ ಹೊಳಲ್ಕೆರೆ ಮುಖ್ಯ ರಸ್ತೆಯ ಸರ್ಕಲ್’ವರೆಗೆ ಕೈ ಬೀಸುತ್ತಾ , ವರ್ತಕರನ್ನು, ಜನರನ್ನು ಆತ್ಮೀಯವಾಗಿ ಮಾತನಾಡಿಸುತ್ತಾ, ಕೈಕುಲುಕಿ ಮತಯಾಚನೆ ಮಾಡುತ್ತಾ ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು…

ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
