;

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…!!!

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕೂಡ್ಲಿಗಿ : ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಗುರುಸಿದ್ದನಗೌಡ ಅವರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬರೆದಿರುವ ಪತ್ರವನ್ನು ಪಟ್ಟಣದ ತಮ್ಮ ಕಚೇರಿಯಲ್ಲಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ನಂತರ ಮಾತನಾಡಿ ಅವರು 20 ವರ್ಷಗಳಿಂದಲೂ ತಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ನಾಲ್ಕು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ತೊಡೆಗಿಕೊಳ್ಳಲಾಗಿತ್ತು. ಕೂಡ್ಲಿಗಿ ಕ್ಷೇತ್ರ ಮರು ವಿಂಗಡಣೆಯ ನಂತರ ಎಲ್ಲಾ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಆದರೆ ಈ ಬಾರಿ ಕೂಲಿಂಗ್ ಕ್ಷೇತ್ರದಲ್ಲಿ ನಾವು ಸೂಚಿಸಿದವರ ಟಿಕೆಟ್ ನೀಡದೆ ಇತ್ತೀಚಿಗೆ ಪಕ್ಷ ಸೇರ್ಪಡೆಗೊಂಡವರಿಗೆ ಟಿಕೆಟ್ ನೀಡಿ ನಮಗೆ ಅನ್ಯಾಯ ಮಾಡಿದ್ದಾರೆ.
ಇದರಿಂದ ಬೇಸತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದೇವೆ.
ಮುಂದಿನ ನಡೆಯನ್ನು ಇನ್ನು ಎರಡು ಮೂರು ದಿನದೊಳಗಾಗಿ ಮುಂದಿನ ನಿರ್ಧಾರ ಮಾಡಲಾಗುವುದು ಎಂದು ಅವರು ತಿಳಿಸಿದರು..

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;