ಶಾಸಕ ಸತೀಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯ
ಗುಡೇಕೋಟೆ- ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಮಹರ್ಷಿ ಶ್ರೀ ವಾಲ್ಮೀಕಿ ಮಹಾಸಭಾದ ಮುಖಂಡ ಹಾಲಿ ಗ್ರಾ ಪಂ ಸದಸ್ಯ ಎನ್ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕರ್ನಾಟಕದಲ್ಲಿ ರಾಜಕೀಯ ಅಧಿಕಾರ ಸಂವಿಧಾನ ಪರವಾದ ಕಾಂಗ್ರೆಸ್‌ಗೆ ಬಹುಮತ ದೊರಕಿರುವುದನ್ನು ವಾಲ್ಮೀಕಿ ಮಹಾಸಭಾ ಸ್ವಾಗತಿಸಿದೆ ಎಂದ ಅವರು, ಈ ಬಾರಿ ಎಲ್ಲಾ ಸಮುದಾಯಗಳು ಬಹುತೇಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿವೆ. ಮುಖ್ಯವಾಗಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಈ ಬಾರಿ ಕಾಂಗ್ರೆಸ್‌ಗೆ ಶಕ್ತಿ ನೀಡಿವೆ. ಮೀಸಲು ಕ್ಷೇತ್ರಗಳಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳೇ ಆಯ್ಕೆಯಾಗಿದ್ದಾರೆ ಎಂದರು.
ಎಸ್.ಟಿ. ಮೀಸಲು ಕ್ಷೇತ್ರದಿಂದ 15 ಹಾಗೂ ಎಸ್ಸಿ ಮೀಸಲು ಕ್ಷೇತ್ರದಿಂದ 22 ಜನರು ಆಯ್ಕೆಯಾಗಿದ್ದಾರೆ. ಎಸ್.ಟಿ. ಸಮುದಾಯದಲ್ಲಿ ಪ್ರಶ್ನಾತೀತ ಪ್ರಭಾವಿ ರಾಜ್ಯ ನಾಯಕರಾದ ಸತೀಶ್ ಜಾರಕಿಹೊಳಿ ಅವರಿಗೆ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಖಾತೆಯನ್ನು ನೀಡುವಂತೆ ಆಗ್ರಹಿಸಿದರು.
ಎಸ್ಸಿ, ಎಸ್ಟಿ, ಹಿಂದುಳಿದ, ಸಮುದಾಯದ ಶಾಸಕರಿಗೂ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ ಅವರು, ಶೋಷಿತ ಸಮುದಾಯಗಳಿಗೆ ಹೆಚ್ಚಿನ ರಾಜಕೀಯ ಅಧಿಕಾರ ನೀಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂಬುದು ಸಂವಿಧಾನದ ಆಶಯ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಮಹಾಸಭಾ ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿಗಳ ಬಳಗದ ಕಾಂಗ್ರೆಸ್ ಮುಖಂಡರು ತಳವಾರಪ್ರಹ್ಲಾದ್.ಕರವೇ ಅದ್ಯಕ್ಷ,ಶಿವಕುಮಾರ್.ಮಡಿವಾಳರ ನಾಗರಾಜ್.ಬೇಕರಿ ಸುರೇಶ್. ರಾಮಾಂಜಿನಿ ಉಪಸ್ಥಿತರಿದ್ದರು…

ವರದಿ. ವಿರೇಶ್ ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
