;

ಸಿದ್ದು ಕೊಣ್ಣುರಗೆ ನಿಗಮ ಮಂಡಳಿ ನೀಡಿ: ಬೆಂಬಲಿಗರ ಒತ್ತಾಯ…!!!

ಸಿದ್ದು ಕೊಣ್ಣುರಗೆ ನಿಗಮ ಮಂಡಳಿ ನೀಡಿ: ಬೆಂಬಲಿಗರ ಒತ್ತಾಯ.

ಮಹಾಲಿಂಗಪುರ: ನಗರದ ವೀರ ರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಏರಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರಿಂದ ಪರಸ್ಪರ ಆಲಿಂಗಿಸಿ ಬಣ್ಣ ಎರಚಿ ವಿಜಯೋತ್ಸವ ಆಚರಿಸಿದರು. ತೇರದಾಳ ಮತಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಿದ್ದು ಕೊಣ್ಣುರ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಪಕ್ಷತ್ರವಾಗಿ ಸ್ಪರ್ಧಿಸಿದರು ಸಹ ಅತೀ ಹೆಚ್ಚು ಮತಗಳನ್ನು ಪಡೆದು ಕೆಲವೆ ಮತಗಳ ಅಂತರದಲ್ಲಿ ಸೋಲುನುಭವಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಿದ್ದು ಕೊಣ್ಣುರ ಅವರಿಗೆ ನಿಗಮ ಮಂಡಳಿ ನೀಡಿ ಕ್ಷೇತ್ರದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆ ಮಾಡಲು ಅನುಕೂಲ ಮಾಡಿ ಕೊಡಬೇಕೆಂದು ಕಾಂಗ್ರೆಸನ ಹಿರಿಯ ಮಖಂಡರಲ್ಲಿ ಮನವಿ ಮಾಡಿದರು. ಕ್ಷೇತ್ರದಲ್ಲಿ ಈಗಾಗಲೇ ಸ್ಥಳೀಯರಿಗೆ ಟಿಕೆಟ್ ನೀಡಿ ಎಂದು ಆಗ್ರಹಿಸಿ ಕ್ಷೇತ್ರದವರಾದ ಸಿದ್ದು ಕೊಣ್ಣುರ ಅವರಿಗೆ ಟಿಕೆಟ್ ನೀಡಿದ್ದರಿಂದ ಕೆಲವರು ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ದ್ರೋಹ ಮಾಡಿ ಪಕ್ಷೇತ್ರವಾಗಿ ಸ್ಪರ್ಧಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು. ಆದ್ದರಿಂದ ಪಕ್ಷಕ್ಕೆ ದ್ರೋಹ ಮಾಡಿದವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು.

ವರದಿ.
ಬಸವರಾಜ ನಂದೆಪ್ಪನವರ
ಮಹಾಲಿಂಗಪುರ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;