;

ಪಶು ಸಖಿ: ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿ…!!!

ಪಶು ಸಖಿ: ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿ

ಕೊಪ್ಪಳ: ಪಶು ಸಂಗೋಪನಾ ಇಲಾಖಾ ಹಾಗೂ ಸಂಜೀವಿನಿ ಯೋಜನೆಯ ಸಹಯೋಗದೊಂದಿಗೆ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಮೇ 19 ರಂದು ಪಶು ಸಖಿ ಯವರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ತರಬೇತಿ ಕಾರ್ಯಾಗಾರವನ್ನು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಮೋಹನ್ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ, ಪಶು ಸಖಿ ಮೂಕ ಪ್ರಾಣಿಗಳ ಸೇವೆ ಮಾಡುವ ಭಾಗ್ಯ ಸಿಕ್ಕಿರುವುದು ನಮ್ಮ-ನಿಮ್ಮ ಅದೃಷ್ಟ. ಹಾಗಾಗಿ ಸಣ್ಣ, ಅತೀ ಸಣ್ಣ ರೈತರಿಗೆ ಪಶು ಸಂಗೋಪನಾ ಬಗ್ಗೆ ಮಾಹಿತಿ ನೀಡಿಲು ಪಶು ಸಖಿಗಳು ಪಶು ವೈದ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಮಾತನಾಡಿ, ಪಶು ಸಖಿಗಳು ಪಶುಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಕೆಲಸ ಕಾರ್ಯಗಳನ್ನು ನಿರ್ವಹಿಸಿ, ಗ್ರಾಮೀಣ ಭಾಗದ ರೈತರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಕೊಪ್ಪಳ ತಾಲೂಕಿನ 38 ಜಿಪಿಎಲ್‌ಎಫ್‌ಗಳ “ಪಶು ಸಖಿ” ರವರ ಕೆಲಸ ಕಾರ್ಯಗಳ ಕುರಿತ, ಪಶುಸಖಿ ಯವರ ಕೆಲಸ ಎಷ್ಟೊಂದು ಪ್ರಮುಖವಾಗಿದೆ ಮತ್ತು ಪಶುಗಳಿಗೆ ಕಾಣಿಸಿಕೊಳ್ಳುವ ರೋಗಗಳು, ಪ್ರಾಥಮಿಕ ಚಿಕಿತ್ಸೆ, ಪಶುಗಳ ಪೋಷಣೆ ಮತ್ತು ಪೌಷ್ಟಿಕ ಆಹಾರ, ಹೆಚ್ಚುವರಿ ಹಾಲಿನ ಉತ್ಪಾದನೆ ಬಗ್ಗೆ ಪಶು ವೈದ್ಯಾದಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ವ್ಯಾಪ್ತಿಯ ಪಶು ವೈದ್ಯಾದಿಕಾರಿಗಳು, ಸಂಜೀವಿನಿ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ವಲಯ ಮೇಲ್ವಿಚಾಕರು, ಸಂಜೀವಿನಿ ಒಕ್ಕೂಟಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪಸು ಸಖಿ ಉಪಸ್ಥಿತರಿದ್ದರು…

ವರದಿ. ಸಂಗೀತ. ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;