;

ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯ ಸಾವು!!!!

ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯ ಸಾವು!!!!
ಕೂಡ್ಲಿಗಿ: ತಾಲೂಕಿನ ಅಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ತಂದೆ ಪಾಪಯ್ಯ 38 ವರ್ಷ ಇವರು ನಿನ್ನೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಡಿ. ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಮೃತ ವ್ಯಕ್ತಿ ಸ್ಥಳೀಯ ಅಪ್ಪೇನಹಳ್ಳಿ ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯನಾಗಿದ್ದು ಇವರಿಗೆ ತಾಯಿ ಬೋರಮ್ಮ ಹಾಗೂ ಮಲ್ಲಿಕಾರ್ಜುನ ಅವರ ಮಕ್ಕಳಾದ ಒಬ್ಬ ಮಗ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಇವರ ಅಗಲಿಕೆಯಿಂದ ಕುಟುಂಬಸ್ಥರಿಗೆ ಭಾರಿ ಆಘಾತವನ್ನುಂಟು ಮಾಡಿದ್ದು ದುಡಿಯುವ ಮಗ ಇಲ್ಲದಂತಾಗಿದೆ ಎಂದು ಮೃತ ವ್ಯಕ್ತಿಯ ತಾಯಿ ಮತ್ತು ಅವರ ಮಕ್ಕಳ ರೋಧನೆ ಕಂಡು ಗ್ರಾಮದವರು ಸಹ ಕಣ್ಣೀರು ಹಾಕಿದರು,
ಇವರ ಸಾವಿನ ಸುದ್ದಿ ಕೇಳಿ ಕೂಡ್ಲಿಗಿ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷ ಕೆ ಮುರಳಿ ರಾಜ್ ಅವರು ಆಗಮಿಸಿ. ಕೂಡಲೇ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ವಿಜಯನಗರ ಜಿಲ್ಲಾಧ್ಯಕ್ಷ ಸಣ್ಣಕ್ಕಿ ಲಕ್ಷ್ಮಣ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಅವರು ಕೂಡಲೇ ಮನವಿಗೆ ಸ್ಪಂದಿಸಿ ಆರ್ಥಿಕ ಧನ ಸಹಾಯವನ್ನು ಮೃತ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಕುಟುಂಬಸ್ಥರಿಗೆ ಮಾಡಿದರು,
ನಂತರ ಸರ್ಕಾರದಿಂದ ಸಿಗುವ ಮೃತ ವ್ಯಕ್ತಿಯ ಅಂತ್ಯಸಂಸ್ಕಾರದ ಹಣವನ್ನು ಕೂಡ್ಲಿಗಿ ತಾಲೂಕು ಪಂಚಾಯಿತಿ ಇ.ಓ. ಅವರು ಸ್ಥಳಕ್ಕೆ ಆಗಮಿಸಿ ಕುಟುಂಬಸ್ಥರಿಗೆ ನೀಡಿದರು.ಹಾಗೂ ರಾಜ್ಯ ಸರ್ಕಾರದಿಂದ ಬರುವ ಪರಿಹಾರದ ಹಣವನ್ನು ಮೃತ ವ್ಯಕ್ತಿ ಗ್ರಾ. ಪಂ. ಸದಸ್ಯ ಮಲ್ಲಿಕಾರ್ಜುನ ಕುಟುಂಬಕ್ಕೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಗ್ರಾ.ಪಂ. ಸದಸ್ಯರ ಒಕ್ಕೂಟದ ತಾಲೂಕು ಅಧ್ಯಕ್ಷ ಕೆ ಮುರಳಿ ರಾಜ್ ನಾಯ್ಕ ತಿಳಿಸಿದರು…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;