;

ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ…!!!

ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಕೂಡ್ಲಿಗಿ: ಗ್ರಾಮೀಣ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಗ್ರಾಮ ಆರೋಗ್ಯ ಅಮೃತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನರೇಗಾ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಿ ಹನುಮಂತಪ್ಪ ಹೇಳಿದರು. ತಾಲ್ಲೂಕಿನ ಅಪ್ಪೇನಹಳ್ಳಿ ಗ್ರಾಮದ ಹಳ್ಳದಲ್ಲಿ ಗುರುವಾರ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಗುಡೆಕೋಟೆ ಪ್ರಾರ್ಥಮಿಕ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ ಅಮೃತ ಅಭಿಯಾನದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ವೇಳೆ ವೈದ್ಯಾಧಿಕಾರಿ ವಿ.ಎ ವೀರೇಶ್ ಮಾತನಾಡಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಳ ಮಾಡಲಾಗುತ್ತದೆ. ನರೇಗಾ ಕೂಲಿಕಾರರಿಗೆ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಬಿಪಿ, ಶುಗರ್, ಮಧುಮೇಹ, ಅತಿ ರಕ್ತದೊತ್ತಡದಂತಹ ಪ್ರಾಥಮಿಕ ಅಸಾಂಕ್ರಮಿಕ ಗುಣಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಸಮಾಲೋಚನೆ ನೀಡಲಾಗುವುದು ಎಂದು ಅವರು ತಿಳಿಸಿದರು. ಆರೋಗ್ಯ ಸಿಬ್ಬಂದಿ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸಿದ 120ಕ್ಕೂ ಹೆಚ್ಚು ಕೂಲಿಕಾರರ ಆರೋಗ್ಯ ತಪಾಸಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಧರು ಪದ್ಮಾವತಿ, ಉಪಾಧ್ಯಕ್ಷೆ ಲಕ್ಶ್ಮಿದೇವಿ, ಸದಸ್ಯರಾದ ಅಂಜಿನಪ್ಪ, ರಾಮಮೂರ್ತಿ, ಜಯಣ್ಣ, ಅನಂತಮ್ಮ, ಗಿರಿಜಮ್ಮ ಹಾಗೂ ಗುಡೆಕೋಟೆ ಪ್ರಾರ್ಥಮಿಕ ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಕಟ್ಟೆ ಬಸಪ್ಪ, ಹೇಮಾ, ಬಿಎಫ್ ಟಿ, ಮೇಟಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕೂಲಿ ಕಾರ್ಮಿಕರು ಇದ್ದರು…

ವರದಿ. ಕೆ. ಎಸ್. ವೀರೇಶ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;